ಬಯೋಮೆಡಿಕಲ್ ಇಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ

Application
Published on

ಚಾಮರಾಜನಗರ: ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಭೋದನ ಆಸ್ಪತ್ರೆಯಲ್ಲಿ ತಾತ್ಕಾಲಿಕ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸಲು ಬಯೋಮೆಡಿಕಲ್ ಇಂಜಿನಿಯರ್ ಒಂದು ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಕನಿಷ್ಟ ಬಯೋಮೆಡಿಕಲ್ ಇಂಜಿನಿಯರಿಂಗ್ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಅರ್ಜಿಯೊಂದಿಗೆ ಸ್ವ ವಿವರ, ಆಧಾರ್ ಕಾರ್ಡ್, ಶೈಕ್ಷಣಿಕ ದಾಖಲೆಗಳ ಜೆರಾಕ್ಸ್ ಪ್ರತಿ ಹಾಗೂ ಅನುಭವ ಹೊಂದಿದ್ದಲ್ಲಿ ಪ್ರಮಾಣ ಪತ್ರಗಳ ಜೆರಾಕ್ಸ್ ಪ್ರತಿಗಳನ್ನು ಲಗತ್ತಿಸಿ ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರು ಹಾಗೂ ಡೀನ್ ರವರಿಗೆ (ದೂ ಸಂ 08226-226701) ಜ.16ರೊಳಗೆ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net