

ರಾಯಚೂರು: ರಾಜ್ಯದಲ್ಲಿ ಮುಂಗಾರು ವಿಲವಾಗಿ ಬರದ ಛಾಯೆ ಆವರಿಸಿದ್ದು, ಸರ್ಕಾರಿ 130 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಲು ಮುಂದಾಗಿದ್ದು, ಕೂಡಲೇ ಬರ ಪೀಡಿತ ಎಂದು ಘೋಷಿಸಿ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಒತ್ತಾಯಿಸಿದೆ.
ಸಂಘದ ನಿಯೋಗ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಪ್ರಶಾಂತಕುಮಾರಗೆ ಮಂಗಳವಾರ ಮನವಿ ಸಲ್ಲಿಸಿ, ಕೃಷಿ ಸಾಲ ವಸೂಲಾತಿ ನಿಲ್ಲಿಸಬೇಕು. ಕೃಷಿ ಪಂಪ್‌ಸೆಟ್‌ಗಳಿಗೆ 7 ಗಂಟೆ ಮೂರು ೇಸ್ ವಿದ್ಯುತ್ ಸರಬರಾಜು ಮಾಡಬೇಕು ಎಂದು ಆಗ್ರಹಿಸಿದರು.
ಬೆಳೆ ನಷ್ಟಕ್ಕೆ ವೈಜ್ಞಾನಿಕ ಪರಿಹಾರ ನೀಡಬೇಕು. ಬರ ತಡೆಯಲು ಸಣ್ಣ ನೀರಾವರಿಗೆ ಒತ್ತು ನೀಡಿ ಅಂರ್ತಜಲ ವೃದ್ಧಿಸಬೇಕು. ಜಾನುವಾರುಗಳಿಗೆ ಮೇವು ಒದಗಿಸಬೇಕು. ಎನ್‌ಡಿಆರ್‌ಎ್ ನೀತಿಯನ್ನು ಮಾರ್ಪಾಡು ಮಾಡಬೇಕು. ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಬೇಕು.
ತಮಿಳುನಾಡಿ ಕಾವೇರಿ ನೀರು ಹರಿಸುವುದನ್ನು ನಿಲ್ಲಿಸಿ ಕಾನೂನು ಹೋರಾಟಕ್ಕೆ ಮುಂದಾಗಬೇಕು. ರೈತರನ್ನು ರಕ್ಷಿಸಲು ವಿಲವಾದಲ್ಲಿ ಎಕರೆಗೆ ತಲಾ 25 ಸಾವಿರ ರೂ.ಪರಿಹಾರ ನೀಡಬೇಕು. ಟಿಎಲ್‌ಬಿಸಿ, ಎನ್‌ಆರ್‌ಬಿಸಿ ಕೊನೆಭಾಗಕ್ಕೆ ಸಮರ್ಪಕ ನೀರು ಹರಿಸಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.
ನಿಯೋಗದಲ್ಲಿ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ್, ಜಿಲ್ಲಾಧ್ಯಕ್ಷ ಪ್ರಭಾಕರ ಪಾಟೀಲ್, ಪದಾಕಾರಿಗಳಾದ ದೊಡ್ಡಬಸನಗೌಡ ಬಲ್ಲಟಗಿ, ಬೂದೆಯ್ಯಸ್ವಾಮಿ, ಗೋವಿಂದ ನಾಯಕ, ದೇವರಾಜ ನಾಯಕ, ಹಾಜಿ ಮಸ್ತಾನ್, ಶಂಕರಗೌಡ, ಜಂಬಯ್ಯ, ಬ್ರಹ್ಮಯ್ಯ ಆಚಾರಿ, ರವಿ ಕುಂಬಾರ, ನರಸಿಂಹಲು ಮ್ಯಾಕಲ, ಮಹಾದೇವ ಇದ್ದರು.