ಬರ ಪರಿಹಾರ ಕಾರ‌್ಯಗಳಿಗೆ ಆದ್ಯತೆ,ನೂತನ ಡಿಸಿ

IMG_20240123_121050_616@-27988045--0003
Published on

ಚಿತ್ರದುರ್ಗ: ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಟಿ.ವೆಂಕಟೇಶ್ ಅವರು ಮಂಗಳವಾರ ಅಧಿಕಾರ ವಹಿಸಿಕೊಂಡರು. ಜಿಲ್ಲಾಧಿಕಾರಿಯಾಗಿದ್ದ ಜಿಆರ್‌ಜೆ ದಿವ್ಯಾಪ್ರಭು ಅವರನ್ನು ಸರ್ಕಾರ ವರ್ಗಾವಣೆಗೊಳಿಸಿ ಸೋಮವಾರ ಆದೇಶಿಸಿತ್ತು.
ಎಡಿಸಿ ಬಿ.ಟಿ.ಕುಮಾರಸ್ವಾಮಿ ಅವರು ನೂತನ ಜಿಲ್ಲಾಧಿಕಾರಿಯನ್ನು ಸ್ವಾಗತಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯವರಾದ ಹಾಗೂ 2006 ಕೆಎಎಸ್ ಅಧಿಕಾರಿಯಾಗಿದ್ದ ವೆಂಕಟೇಶ್ ಅವರು 2007ರಿಂದ ಅಂದಾಜು ಮೂರುವರೆ ವರ್ಷ ಚಿತ್ರದುರ್ಗ ನಂತರದಲ್ಲಿ ಹರಪನಹಳ್ಳಿ ಉಪ ವಿಭಾಗಾ ಧಿಕಾರಿಗಳಾಗಿ,ಚಿಕ್ಕಬಳ್ಳಾಪುರ,ಮೈಸೂರು ಜಿಲ್ಲೆಗಳ ಅಪರ ಜಿಲ್ಲಾಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದರು.
ಐಎಎಸ್ ಅಧಿಕಾರಿಯಾಗಿ 2015ರಲ್ಲಿ ಬಡ್ತಿ ಪಡೆದ ವೆಂಕಟೇಶ್ ಅವರು, ರಾಜ್ಯಪುರಾತತ್ವ ಇಲಾಖೆ ಆಯುಕ್ತರು,ಕೆಎಸ್‌ಆರ್‌ಟಿಸಿ ಹಾಗೂ ಪ್ರವಾಸೋದ್ಯಮ ಇಲಾಖೆ ನಿರ್ದೇಶಕರು ಹಾಗೂ ವಿಜಯನಗರ ಜಿಲ್ಲೆ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.
ಅಧಿಕಾರ ವಹಿಸಿಕೊಂಡ ಬಳಿಕ ಮಾತನಾಡಿದ ನೂತನ ಜಿಲ್ಲಾಧಿಕಾರಿ, ಜಿಲ್ಲೆಯಲ್ಲಿ ಬರ ಪರಿಹಾರ ಕಾರ್ಯಗಳಿಗೆ ಆದ್ಯತೆ ನೀಡಲಾ ಗುವುದು. ಬೇಸಿಗೆಯಲ್ಲಿ ಜನರಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈ ಗೊಳ್ಳುವುದಾಗಿ ಹೇಳಿದರು. ಜನರ ಶ್ರೇಯೋಭಿವೃದ್ಧಿಗಾಗಿ ಸರ್ಕಾರ ರೂಪಿಸಿರುವ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿ ಸಲು ಕ್ರಮ ವಹಿಸಲಾಗುವುದೆಂದರು.
ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಪ್ರಭಾರ ಉಪವಿಭಾಗಾಧಿಕಾರಿ ವಿವೇಕ್, ಜಿಲ್ಲಾ ಕೈಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಬಿ.ಆನಂದ್ ಮತ್ತಿತರ ಅಧಿಕಾರಿಗಳಿದ್ದರು. ಅಧಿಕಾರ ವಹಿಸಿಕೊಳ್ಳುವ ಮುನ್ನ ವೆಂಕಟೇಶ್ ನಾಯಕನಹಟ್ಟಿ ದೇವಾಲಯಕ್ಕೆ ಭೇಟಿ ನೀಡಿ ದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net