ಬರ ಪರಿಹಾರ ಕುರಿತು ಪ್ರಗತಿ ಪರಿಶೀಲನೆ

Sabhe
Published on

ಚಿತ್ರದುರ್ಗ: ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ) ಸರ್ಕಾರದ ಪ್ರಧಾನ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಬರ ಪರಿಹಾರ, ಪ್ರಕೃತಿ ವಿಕೋಪ ವಿಷಯಗಳ ಸಂಬಂಧ ಸೋಮವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ನಗರದ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ಬರ ಪರಿಸ್ಥಿತಿ ನಿರ್ವಹಣೆ, ಬಾಕಿ ಬೆಳೆಹಾನಿ ಪರಿಹಾರ ವಿತರಣೆ, ಮುಂಗಾರು 2024ರ ಸಂಬಂಧ ಚಿತ್ರದುರ್ಗ ಜಿಲ್ಲೆಯಲ್ಲಿನ ಪೂರ್ವಸಿದ್ಧತೆಗಳ, ಗುಡುಗು-ಸಿಡಿಲು, ಮಳೆ ಮತ್ತು ಇತರೆ ಪ್ರಕೃತಿ ವಿಕೋಪದಿಂದ ಉಂಟಾಗುವ ಹಾನಿ ತಡೆಯಲು ಕೈಗೊಂಡ ಕ್ರಮಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಎಡಿಸಿ ಬಿ.ಟಿ.ಕುಮಾರಸ್ವಾಮಿ, ಎಸಿ ಎಂ.ಕಾರ್ತಿಕ್, ಕೃಷಿ ಇಲಾಖೆ ಜಂಟಿಕೃಷಿ ನಿರ್ದೇಶಕ ಮಂಜುನಾಥ್, ವಿವಿಧ ಇಲಾಖೆ ಅಧಿಕಾರಿಗಳಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net