ಬರಗೇರಮ್ಮ ದೇವಿಗೆ ನವರಾತ್ರಿ ಪೂಜೆ

Baragerammadevi
Published on

ಚಿತ್ರದುರ್ಗ: ನವರಾತ್ರಿಯಲ್ಲಿ ನಿತ್ಯ ಬೆಳಗ್ಗೆ 5.30ಕ್ಕೆ ಹೊಳಲ್ಕೆರೆ ರಸ್ತೆಯ ಬರಗೇರಮ್ಮ ದೇವಿಗೆ ಪಂಚಾಮೃತ ಅಭಿಷೇಕ, ಮಹಾಮಂಗಳಾರತಿ ಪೂಜೆ ಜರುಗಲಿದೆ. ಭಕ್ತರಿಗೆ ದರ್ಶನಕ್ಕೆ ರಾತ್ರಿ 8ರವರೆಗೂ ಅವಕಾಶ ಕಲ್ಪಿಸಲಾಗಿದೆ. ವಿಜಯದಶಮಿ ಹಬ್ಬವಾದ ಮರುದಿನ ದೇವಿಯ ಕೆಂಡಾರ್ಚನೆ ಮಹೋತ್ಸವ ನೂರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಲಿದೆ ಎಂದು ದೇಗುಲದ ಅರ್ಚಕ ಪೂಜಾರ್ ಕಸ್ತೂರಪ್ಪ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net