ಬರಪೀಡಿತ ಕಮಲನಗರ ಘೋಷಿಸಿ

8kmr1
Published on

ಕಮಲನಗರ: ತಾಲೂಕು ಬರಪೀಡಿತವೆಂದು ಘೋಷಣೆ ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ರೈತ ಸಂಘದ ಪ್ರಮುಖರು ಒತ್ತಾಯಿಸಿದರು.
ಈ ಕುರಿತು ರೈತ ಸಂಘದ ತಾಲೂಕು ಅಧ್ಯಕ್ಷ ಪ್ರವೀಣ ಕುಲಕರ್ಣಿ ನೇತೃತ್ವದ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದ ಮನವಿ ಪತ್ರವನ್ನು ತಹಸೀಲ್ದಾರ್ ಅಮಿತಕುಮಾರ ಕುಲಕರ್ಣಿ ಅವರಿಗೆ ಗುರುವಾರ ಸಲ್ಲಿಸಿತು.
ಸೂಕ್ತ ಮಳೆಯಾಗದ ಕಾರಣ ತಾಲೂಕಿನಲ್ಲಿ ಮುಂಗಾರು ಬಿತ್ತನೆ ಬೆಳೆಗಳಾದ ಹೆಸರು, ಉದ್ದು, ತೊಗರಿ, ಸೋಯಾಬಿನ್ ಸೇರಿ ಇತರೆ ಬೆಳೆ ನಾಶವಾಗಿವೆ. ಕಮಲನರ ತಾಲೂಕನ್ನು ಸಂಪೂರ್ಣ ಬರ ಪೀಡಿತ ಎಂದು ಘೋಷಿಸಿ, ಎಕರೆಗೆ ರೂ. ೫೦ ಸಾವಿರ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ಬೆಳೆ ವಿಮೆ ಕಟ್ಟಿದ ರೈತರಿಗೆ ವಿಮೆ ಕಂಪನಿಯಿAದ ಹಣ ಬಿಡುಗಡೆ ಮಾಡಬೇಕು. ಕೇಂದ್ರ ಸರ್ಕಾರ ಕಬ್ಬಿಗೆ ದರ ನಿಗದಿಪಡಿಸಿದಂತೆ ರಾಜ್ಯ ಸರ್ಕಾರ ಪ್ರತಿ ಟನ್ನಿಗೆ ರೂ.೫೦೦ ನೀಡಬೇಕು. ರೈತರ ಪಂಪ್ ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಒದಗಿಸಬೇಕು. ನಮ್ಮ ಹೊಲ ನಮ್ಮ ರಸ್ತೆ ಯೋಜನೆಯಡಿ ರೈತರ ಹೊಲಗಳಿಗೆ ರಸ್ತೆ ನಿರ್ಮಿಸಬೇಕು. ಕಾಡು ಪ್ರಾಣಿಗಳಿಂದ ರೈತರ ಬೆಳೆ ರಕ್ಷಣೆ ಮಾಡಲು ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.
ಪ್ರಮುಖರಾದ ವೈಜನಾಥ ವಡ್ಡೆ, ರಾಜಕುಮಾರ ಪೊಲೀಸ್ ಪಾಟೀಲ್, ಉತ್ತಮರಾವ ಮಾನೆ, ವಿಠ್ಠಲರಾವ ಪಾಟೀಲ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net