ಬರ್ಬರ ಹತ್ಯೆಯಾದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅಂತಿಮ ಶವಯಾತ್ರೆಗೆ ಸಿದ್ದತೆ, ಬೆಳ್ಳಾರೆಯಲ್ಲಿ ಅಂತ್ಯಸಂಸ್ಕಾರ

ggg
ಬಿಜೆಪಿ ಯುವ ಮೋರ್ಚಾ ಜಿಲ್ಲಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ
Published on

ಪುತ್ತೂರು: ದುಷ್ಕರ್ಮಿಗಳಿಂದ ಬರ್ಬರ ಹತ್ಯೆಯಾದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ಮೃತ ಶರೀರದ ಶವಯಾತ್ರೆಗೆ ಸಿದ್ದತೆ ನಡೆಯುತ್ತಿದ್ದು, ಪುತ್ತೂರು ಸರ್ಕಾ ಆಸ್ಪತ್ರೆಯಿಂದ ಮೆರವಣಿಗೆಯಲ್ಲಿ ಹೊರಟು ದರ್ಬೆ, ಸವಣೂರು ಕಾಣಿಯೂರು, ನಿಂತಿಕಲ್ಲು ಮೂಲಕ ಬೆಳ್ಳಾರೆಗೆ ಪ್ರವೀಣ್ ಅವರ ಮೃತದೇಹವನ್ನು ಕೊಂಡೊಯ್ಯಲು ಹಿಂದೂ ಸಂಘಟನೆಗಳು ಹಾಗೂ ಬಂಧು ಬಳಗದವರು ನಿರ್ಧರಿಸಿದ್ದಾರೆ.
ಬೆಳ್ಳಾರೆಯಲ್ಲಿ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ದತೆ ನಡೆಯುತ್ತಿದ್ದು, ಅಂತಿಮ ಶವಯಾತ್ರೆವೇಳೆ ಪುತ್ತೂರು, ಸುಳ್ಯ ಹಾಗೂ ಕಡಬ ತಾಲೂಕುಗಳಲ್ಲಿ ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚಿ, ವಾಹನ ಸಂಚಾರ ನಿಲ್ಲಿಸಿ ಬಂದ್ ಮಾಡಲು ಹಿಂದೂ ಪರ ಸಂಘಟನೆಗಳು ಕರೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net