ಬಲಪಡಿಸುವಲ್ಲಿ ಯುವಜನರ ಪಾತ್ರ ಪ್ರಮುಖ

15 KAMPLI 05
Published on

ಕಂಪ್ಲಿ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸೆ ಕೋಶದಡಿ ರಾಜ್ಯಶಾಸ್ತ್ರ ವಿಭಾಗ ಮತ್ತು ಚುನಾವಣಾ ಸಾಕ್ಷರತಾ ಸಮಿತಿಯಿಂದ ಸೋಮವಾರ ಪ್ರಜಾಪ್ರಭುತ್ವ ದಿನಾಚರಣೆ ನಡೆಯಿತು.

ಪ್ರಾಚಾರ್ಯ ಡಾ.ಬಿ.ಶ್ರೀನಿವಾಸರೆಡ್ಡಿ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಯುವಜನತೆಯ ಪಾತ್ರ ಮಹತ್ವದ್ದಾಗಿದೆ. ಸಂವಿಧಾನ ನೀಡಿದ ಹಕ್ಕು ಮತ್ತು ಕರ್ತವ್ಯಗಳನ್ನು ಸಮನಾಗಿ ಸ್ವೀಕರಿಸಬೇಕಿದೆ ಎಂದರು.

ಚುನಾವಣಾ ಸಾಕ್ಷರತಾ ಸಮಿತಿ ಸಂಚಾಲಕಿ ರಾಜ್ಮಾ ಟಿ.ಎಂ.ಆರ್ ಮಾತನಾಡಿ, ಜನಸಾಮಾನ್ಯರಲ್ಲಿ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯ ಬಗೆಗಿನ ಅರಿವು ಮೂಡಿಸುವುದಕ್ಕಾಗಿ, 2025ರ ಸೆ.15ರಿಂದ 2025ರ ಸೆ.20ರತನಕ ಆನ್‌ಲೈನ್ ರಸಪ್ರಶ್ನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕ್ಯೂ-ಆರ್ ಕೋಡ್ ಬಳಸಿ ರಸಪ್ರಶ್ನೆಯಲ್ಲಿ ಭಾಗವಹಿಸಿ ಇ-ಪ್ರಮಾಣ ಪತ್ರ ಪಡೆಯಬಹುದು ಎಂದರು.

ಸಹಾಯಕ ಪ್ರಾಧ್ಯಾಪಕರಾದ ಎಂ.ಪಿ.ಬಾಲಾಜಿ, ಡಾ.ಚಂದ್ರಶೇಖರ್ ವಿ.ಬಿಳೇಗುಡ್ಡ, ಡಾ.ಕೆ.ಮಹೇಶ, ಡಾ.ಅನ್ನಪೂರ್ಣ ಗುಡದೂರು., ಗ್ರಂಥಪಾಲಕ ಎ.ಜಿ.ವೀರಭದ್ರಪ್ಪ., ಅಧೀಕ್ಷಕಿ ಬಿ.ನಾಗಮ್ಮ, ಎಫ್.ಡಿ.ಎ ಸಿದ್ದಾರೂಢ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net