ಬಲ್ಲಚಂಡ ತಂಡಕ್ಕೆ ಭರ್ಜರಿ ಜಯ

ballachanda
Published on

ನಾಪೋಕ್ಲು: ಇಲ್ಲಿನ ಚೆರಿಯಪರಂಬುವಿನ ಜನರಲ್ ಕೆ. ಎಸ್. ತಿಮ್ಮಯ್ಯ ಕ್ರೀಡಾಂಗಣದಲ್ಲಿ ಆಯೋಜಿಸಿರುವ ಬಾಳೆಯಡ ಕಪ್ ಕ್ರಿಕೆಟ್ ನಮ್ಮೆ ಯ ಮಂಗಳವಾರದ ಪಂದ್ಯಗಳಲ್ಲಿ ಮೂರು ತಂಡಗಳು ಮುನ್ನಡೆ ಸಾಧಿಸಿದವು.


ದಿನದ ಮೊದಲ ಪಂದ್ಯದಲ್ಲಿ ಕಾಣತಂಡ ವಿರುದ್ಧ ಅಟ್ರಂಗಡ ಸ್ಪರ್ಧಿಸಿತು. ಅಟ್ರಂಗಡ ತಂಡ ಎರಡು ವಿಕೆಟ್ ನಷ್ಟಕ್ಕೆ 52 ರನ್ ಗಳಿಸಿದರೆ ಕಾಡತಂಡ ತಂಡ 4 ವಿಕೆಟ್ ನಷ್ಟಕ್ಕೆ 50 ರನ್ ಗಳಿಸಿತು.

ಈ ಪಂದ್ಯದಲ್ಲಿ ಅಟ್ರಂಗಡ ಜಯ ಸಾಧಿಸಿತು. ಮುಂದಿನ ಪಂದ್ಯದಲ್ಲಿ ಮಾಚಟ್ಟಿರ ತಂಡ ಒಂಬತ್ತು ವಿಕೆಟ್ ನಷ್ಟಕ್ಕೆ 42 ರನ್ ಗಳಿಸಿದ್ದು ಉತ್ತರವಾಗಿ ಆಡಿದ ಮಾಳೆಟ್ಟಿರ (ಕೆದ ಮುಳ್ಳೂರು) ತಂಡ ಯಾವುದೇ ವಿಕೆಟ್ ನಷ್ಟವಿಲ್ಲದೆ 43 ರನ್ ಗಳಿಸಿ ಜಯಸಾಧಿಸಿತು. ಕರೋಟಿರ ತಂಡ ಮೂರು ವಿಕೆಟ್ ನಷ್ಟಕ್ಕೆ 54 ರನ್ ಗಳಿಸಿತು. ಉತ್ತರವಾಗಿ ಆಡಿದ ಬಲ್ಲಚಂಡ ತಂಡ ಯಾವುದೇ ವಿಕೆಟ್ ನಷ್ಟವಿಲ್ಲದೆ 56 ರನ್ ಗಳಿಸಿ ಗೆಲುವು ಸಾಧಿಸಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net