ಬಳ್ಳಾರಿಯಲ್ಲಿ ಚಿಲ್ಲಿ ಮಾರುಕಟ್ಟೆ ತ್ವರಿತ ಆರಂಭಿಸಿ

24 YERRISWAMY 04
Published on

ಬಳ್ಳಾರಿ: ನಗರದಲ್ಲಿ ಚಿಲ್ಲಿ ಮಾರುಕಟ್ಟೆ ನಿರ್ಮಾಣಕ್ಕಾಗಿ 21 ಎಕರೆ ಸ್ಥಳ ಗುರುತಿಸಿದ್ದು, ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಅವರಿಗೆ ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಗಣಪಾಲ್ ಐನಾಥರೆಡ್ಡಿ ಸೋಮವಾರ ಮನವಿ ಸಲ್ಲಿಸಿದರು.

ನಗರದ ಬೆಳಗಲ್ ಕ್ರಾಸ್ ಬಳಿಯ 21 ಎಕರೆ ಜಮೀನನ್ನು ಮಾರುಕಟ್ಟೆ ನಿರ್ಮಾಣಕ್ಕಾಗಿ ಸರ್ಕಾರ ಅನುಮೋದನೆ ನೀಡಿದೆ. ಆದರೆ, ಈ ಕುರಿತ ಕೆಲಸ ಇವತ್ತಿಗೂ ಕಾರ್ಯರೂಪಕ್ಕೆ ಬಂದಿಲ್ಲ. ದಯವಿಟ್ಟು ಅದಷ್ಟು ಬೇಗ ಕಾರ್ಯಗತಗೊಳಿಸಬೇಕು. ಇದರಿಂದ ರೈತರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ರೈತರು ಗುಂಟೂರು ಹಾಗೂ ಬ್ಯಾಡಗಿ ತಳಿ ಮೆಣಸಿನಕಾಯಿ ಬೆಳೆಯುತ್ತಿದ್ದು ಬೆಂಬಲ ಬೆಲೆ ನೀಡಬೇಕು. ಕೆಲ ದಿನಗಳಿಂದ ಮಾರುಕಟ್ಟೆಯಲ್ಲಿ ಮೆಣಸಿನಕಾಯಿ ಬೆಲೆ ಇಳಿಕೆಯಿಂದಾಗಿ ಮೂವರು ರೈತರು ಹಾಗೂ ಮೂವರು ಪರಿಕರ ಮಾರಾಟಗಾರರು ಅತ್ಮಹತ್ಯೆಗೆ ಶರಣಾಗಿದ್ದಾರೆ. ಮುಂದೆ ಹೀಗಾಗದಂತೆ ಸರ್ಕಾರ ಎಚ್ಚರ ವಹಿಸಬೇಕು ಎಂದು ಮನವಿ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net