ಬಳ್ಳಾರಿಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವೆ

S THIPPESWAMY ex MLA mlk (2)
Published on

ಚಿತ್ರದುರ್ಗ: ಎಲ್ಲ ಪಕ್ಷದವರೂ ಮ್ಯಾಸ ನಾಯಕ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ. ಹೀಗಾಗಿ ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದು ಬಿಜೆಪಿ ಮಾಜಿ ಶಾಸಕ ನೇರ್ಲಗುಂಟೆ ತಿಪ್ಪೇಸ್ವಾಮಿ ತಿಳಿಸಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ನಾನೂ ಬಳ್ಳಾರಿ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದೆ. ಈ ಸಂಬಂಧ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಭೇಟಿಯಾಗಿದ್ದೆ. ಮಾಜಿ ಸಚಿವ ಶ್ರೀರಾಮುಲು ಕೂಡ ಟಿಕೆಟ್ ಕೊಡಿಸುವ ಭರವಸೆ ನೀಡಿದ್ದರು. ಆದರೂ ಕೈತಪ್ಪಿದೆ ಎಂದು ಬೇಸರಿಸಿದರು.

ಪರಿಶಿಷ್ಟ ಪಂಗಡ ಮೀಸಲಾತಿ ಸಿಕ್ಕಿರುವುದೇ ಮ್ಯಾಸ ನಾಯಕರಿಂದ. ಆದರೆ, ಇದರ ಲಾಭ ಬೇರೆಯವರು ಪಡೆಯುತ್ತಿದ್ದಾರೆ. ಬಳ್ಳಾರಿ ಮತ್ತು ಚಿತ್ರದುರ್ಗ ಜಿಲ್ಲೆಯಲ್ಲಿ ನಾವು ಹೆಚ್ಚಿನ ಸಂಖ್ಯೆಯಲ್ಲಿ ಇದ್ದೇವೆ. ಎಲ್ಲ ಪಕ್ಷದವರಿಗೂ ನಮ್ಮ ಸಮುದಾಯದ ಮತಗಳು ಮಾತ್ರ ಬೇಕೆ ಹೊರತು ಸಮಾಜದ ಯಾರೊಬ್ಬರಿಗೂ ಟಿಕೆಟ್ ಏಕೆ ನೀಡುತ್ತಿಲ್ಲ. ಪ್ರಾಶಸ್ತ್ಯ ನೀಡದ ಕಾರಣ ಸ್ಪರ್ಧೆ ಖಚಿತ ಎಂದು ಸ್ಪಷ್ಟಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net