

ಯಡ್ರಾಮಿ: ತೀವ್ರ ಕುತೂಹಲ ಮೂಡಿಸಿದ್ದ ಮಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ಗುರುವಾರ ಶಾಂತಿಯುತವಾಗಿ ನಡೆದಿದ್ದು, ಅಧ್ಯಕ್ಷರಾಗಿ ಬಸನಗೌಡ ಮಾಲಿಪಾಟೀಲ್ ಹಾಗೂ ಉಪಾಧ್ಯಕ್ಷರಾಗಿ ರೂಪಾಬಾಯಿ ಚವ್ಹಾಣ್ ಆಯ್ಕೆಯಾಗಿದ್ದಾರೆ. ಹಿಂದಿನ ಅಧ್ಯಕ್ಷ-ಉಪಾಧ್ಯಕ್ಷ ರಾಜೀನಾಮೆಯಿಂದ ತೆವವಾಗಿದ್ದ ಸ್ಥಾನಕ್ಕೆ ಗುರುವಾರ ಆಯ್ಕೆ ಪ್ರಕ್ರಿಯೆ ನಡೆಯಿತು. ಒಟ್ಟು 20 ಸದಸ್ಯರಿದ್ದು, ಓರ್ವ ಮೆಂಬರ್ ನಿಧನಹೊಂದಿದ್ದರಿAದ 19 ಸದಸ್ಯರಿದ್ದಾರೆ. ಅಧ್ಯಕ್ಷ ಸಾಮಾನ್ಯ- ಉಪಾಧ್ಯಕ್ಷ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಬಸನಗೌಡ, ಕಂಠೆಪ್ಪ ಚೊಣ್ಣಿ ನಾಮಪತ್ರ ಸಲ್ಲಿಸಿದ್ದರು. ಬಸನಗೌಡ 11 ವೋಟ್ ಪಡೆದು ಗೆಲುವು ಸಾಧಿಸಿದರೆ, ಕಂಠೆಪ್ಪ 8 ಮತ ಪಡೆದು ಪರಾಭವಗೊಂಡರು. ಉಪಾಧ್ಯಕ್ಷ ಸ್ಥಾನಕ್ಕೆ ರೂಪಾಬಾಯಿ ಮಾತ್ರ ಉಮೇದುವಾರಿಕೆ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆ ಘೋಷಣೆ ಮಾಡಲಾಯಿತು. ತಹಸೀಲ್ದಾರ್ ಶಶಿಕಲಾ ಪಾದಗಟ್ಟಿ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಪಿಡಿಒ ಭಿಮರಾಯ ಪೂಜಾರಿ, ಆರ್‌ಐ ರಘುರಾಜ, ಮಹಾಲಿಂಗ ಜತೆಗಿದ್ದರು.