

ಬೀದರ್: ಏಪ್ರಿಲ್ 23ಕ್ಕೆ ನಗರದಲ್ಲಿ ಅದ್ಧೂರಿ ಬಸವ ಜಯಂತಿ ಆಚರಿಸಲು ಇಲ್ಲಿಯ ಗಾಂಧಿಗಂಜ್‍ನ ಬಸವೇಶ್ವರ ದೇವಸ್ಥಾನದಲ್ಲಿ ಏಪ್ರಿಲ್ 10 ರಂದು ಸಂಜೆ 6ಕ್ಕೆ ಪೂರ್ವ ಭಾವಿ ಸಿದ್ಧತಾ ಸಭೆ ಕರೆಯಲಾಗಿದೆ ಎಂದು ಬಸವ ಜಯಂತಿ ಉತ್ಸವ ಸಮಿತಿಯ ಅಧ್ಯಕ್ಷ ಬಸವರಾಜ ಪಾಟೀಲ ಹಾರೂರಗೇರಿ ತಿಳಿಸಿದ್ದಾರೆ.
ಸಭೆಯಲ್ಲಿ ಅರ್ಥಪೂರ್ಣ ಬಸವ ಜಯಂತಿ ಆಚರಣೆ ಕುರಿತು ಚರ್ಚೆ ಹಾಗೂ 2023ನೇ ಸಾಲಿನ ಬಸವ ಜಯಂತಿ ಉತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ ನಡೆಯಲಿದೆ ಎಂದು ಹೇಳಿದ್ದಾರೆ.
ಸಮಾಜದ ಮುಖಂಡರು, ಬಸವ ಪರ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಬಸವಾನುಯಾಯಿಗಳು ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಯಶಸ್ವಿ ಜಯಂತಿ ಆಚರಣೆಗೆ ಸಲಹೆ ನೀಡಬೇಕು ಎಂದು ಕೋರಿದ್ದಾರೆ. ಈ ಹಿಂದೆ ಏಪ್ರಿಲ್ 7ಕ್ಕೆ ಕರೆದಿದ್ದ ಪೂರ್ವ ಭಾವಿ ಸಿದ್ಧತಾ ಸಭೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿತ್ತು.