ಚಿತ್ರದುರ್ಗ: ಮುರುಘಾಮಠದಲ್ಲಿ ಏ. 29ರಂದು ಸಂಜೆ 5.30ಕ್ಕೆ ಸಾಂಸ್ಕೃತಿಕ ನಾಯಕ ಬಸವೇಶ್ವರ ಜಯಂತಿ ಆಚರಿಸುವ ಸಂಬಂಧ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದೆ..ಸಭೆಯಲ್ಲಿ ವಿವಿಧ ಮಠಾಧೀಶರು, ಶ್ರೀಮಠದ ಭಕ್ತರು ಹಾಗೂ ಬಸವಕೇಂದ್ರಗಳ ಪದಾಧಿಕಾರಿಗಳು ಭಾಗವಹಿಸಿ, ಸೂಕ್ತ ಸಲಹೆ ನೀಡಿ ಸಹಕರಿಸಬೇಕು ಎಂದು ಪ್ರಕಟಣೆ ತಿಳಿಸಿದೆ.