ಬಸವ ಭವನ ನಿರ್ಮಾಣ ಕಾಮಗಾರಿಗೆ ಚಾಲನೆ

29-GPT-4
Published on

ಗುಂಡ್ಲುಪೇಟೆ: ತಾಲೂಕಿನ ನೇನೆಕಟ್ಟೆ ಗ್ರಾಮದಲ್ಲಿ ಭಾನುವಾರ 50 ಲಕ್ಷ ರೂ. ವೆಚ್ಚದ ಸಿಸಿ ರಸ್ತೆ, ಚರಂಡಿ ಹಾಗೂ 20 ಲಕ್ಷ ರೂ. ವೆಚ್ಚದಲ್ಲಿ ಬಸವ ಭವನ ನಿರ್ಮಾಣ ಕಾಮಗಾರಿಗೆ ಶಾಸಕ ನಿರಂಜನಕುಮಾರ್ ಭೂಮಿಪೂಜೆ ನೆರವೇರಿಸಿದರು.


ಗ್ರಾಮದ ಜನರ ಬೇಡಿಕೆ ಮೇರೆಗೆ ಬಸವ ಭವನ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗಿದೆ. 2.5 ಕೋಟಿ ರೂ.ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಮಾಡಲಾಗಿದೆ. ತಮ್ಮ ಬಗ್ಗೆ ವಿಪಕ್ಷಗಳು ವಿನಾ ಕಾರಣ ಆರೋಪ ಮಾಡುತ್ತಿವೆ. ಆದರೆ, ಅವರು ತಮ್ಮ 25 ವರ್ಷಗಳ ಅವಧಿಯಲ್ಲಿ ಗ್ರಾಮಕ್ಕೆ ನೀಡಿದ ಕೊಡುಗೆ ಏನು ಎಂಬುದನ್ನು ಜನರಿಗೆ ತೋರಿಸಲಿ ಎಂದು ಸವಾಲು ಹಾಕಿದರು.


ಗ್ರಾಪಂ ಅಧ್ಯಕ್ಷೆ ಮಹದೇವಮ್ಮ, ಪಿಕಾರ್ಡ್ ಬ್ಯಾಂಕ್ ಉಪಾಧ್ಯಕ್ಷ ಮಾಡ್ರಹಳ್ಳಿ ಮಹೇಶ್, ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಮಹದೇವಪ್ಪ, ಮುಖಂಡ ಸ್ವಾಮಪ್ಪ, ಮೂರ್ತಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net