ಬಸವಕಲ್ಯಾಣದಲ್ಲಿ ವೈದ್ಯೆ ಆತ್ಮಹತ್ಯೆ

Dr sushma
Published on

ಬಸವಕಲ್ಯಾಣ: ರಾಷ್ಟ್ರೀಯ ಬಾಲ ಸ್ವಾಸ್ಥ ಕಾರ್ಯಕ್ರಮದ (ಆರ್ಬಿಎಸ್ಕೆ) ಅಡಿ ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೈದ್ಯೆಯೊಬ್ಬರು ಭಾನುವಾರ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇಲ್ಲಿಯ ಕ್ರೀಡಾಂಗಣ ಹತ್ತಿರದ ಮನೆಯಲ್ಲಿ ಡಾ.ಸುಷ್ಮಾ ರಾಜಕುಮಾರ ಬಿರಾದಾರ (35) ಸಾವಿಗೆ ಶರಣಾದವರು. ಕೌಟುಂಬಿಕ ಕಲಹವೇ ಇದಕ್ಕೆ ಕಾರಣ ಎನ್ನಲಾಗಿದೆ. ಬೆಳಗ್ಗಿನ ಜಾವ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಸಿಪಿಐ ರಘುವೀರಸಿಂಗ್ ಠಾಕೂರ್, ಪಿಎಸ್ಐ ಅಮರ ಕುಲಕಣರ್ಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net