ಬಸವಸಾಗರ ಒಳಹರಿವಿನಲ್ಲಿ ಇಳಿಕೆ

29-07kodekal04
ನಾರಾಯಣಪುರದ ಬಸವಸಾಗರ ಜಲಾಶಯಕ್ಕೆ ಶನಿವಾರ ಒಳಹರಿವಿನಲ್ಲಿ ಇಳಿಕೆಯಾದ ಕಾರಣ ೨೫ ಮುಖ್ಯ ಗೇಟ್‌ಗಳ ಮೂಲಕ ಕೃಷ್ಣಾ ನದಿಗೆ ೭೬ ಸಾವಿರ ಕ್ಯೂಸೆಕ್ ನೀರು ಬಿಡಲಾಯಿತು.
Published on

ಕೊಡೇಕಲ್: ಮೂರು ದಿನಗಳಿಂದ ಮೈದುಂಬಿ ಹರಿಯುತ್ತಿದ್ದ ಕೃಷ್ಣೆ ಶನಿವಾರ ಕೊಂಚ ಮಟ್ಟಿಗೆ ಶಾಂತಾಳಾಗಿದ್ದು, ನದಿ ತೀರದ ಗ್ರಾಮಸ್ಥರಲ್ಲಿದ್ದ ಆತಂಕ ಸ್ವಲ್ಪಮಟ್ಟಿಗೆ ದೂರಾಗಿದೆ.

ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದ್ದರಿಂದ ಬಸವಸಾಗರಕ್ಕೆ ನೀರು ಹರಿಸಲಾಗಿತ್ತು. ಇದರಿಂದ ಜಲಾಶಯ ಭರ್ತಿಯಾಗಿ ನೀರಿನ ಸಂಗ್ರಹ ಕಾಯ್ದುಕೊಂಡು ನದಿಗೆ ೧.೫೦ ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ಬಿಡಲಾಗಿತ್ತು. ಆದರೆ ಶುಕ್ರವಾರ ರಾತ್ರಿಯಿಂದ ಆಲಮಟ್ಟಿ ಒಳಹರಿವಿನಲ್ಲಿ ಇಳಿಕೆಯಾಗಿದ್ದರಿಂದ ಬಸವಸಾಗರದಲ್ಲೂ ಇಳಿಕೆ ಕಂಡುಬಂದಿದೆ.

ಒಳಹರಿವು ಮುಂದುವರಿಯುವ ಸಾಧ್ಯತೆಗಳಿದ್ದು, ನದಿ ತೀರದ ಹಳ್ಳಿಗರು ಎಚ್ಚರ ವಹಿಸಬೇಕು ಎಂದು ನಿಗಮದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net