ಬಸವಸಾಗರದಿಂದ ೫೧೪೭೫ ಕ್ಯೂಸೆಕ್ ನೀರು ಕೃಷ್ಣೆಗೆ

18-06kodekal02
Published on

ಕೊಡೇಕಲ್: ನಾರಾಯಣಪುರ ಬಸವಸಾಗರ ಜಲಾಶಯದಿಂದ ಬುಧವಾರ ಸಂಜೆಯಿAದ ೫೧೪೭೫ ಕ್ಯೂಸೆಕ್ ಪ್ರಮಾಣದ ನೀರು ಕೃಷ್ಣಾ ನದಿಗೆ ಹರಿಬಿಡಲಾಗಿದೆ.

ಮಲಪ್ರಭಾ ನದಿ ಜಲಾನಯನ ಪ್ರದೇಶ ಹಾಗೂ ಜಲಾಶಯದ ಮೇಲ್ಭಾಗದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಮತ್ತು ಆಲಮಟ್ಟಿ ಜಲಾಶಯದಿಂದ ನದಿಗೆ ನೀರು ಹರಿಸುತ್ತಿರುವುದರಿಂದ ನಾರಾಯಣಪುರ ಬಸವಸಾಗರ ಜಲಾಶಯಕ್ಕೆ ನೀರಿನ ಒಳಹರಿವು ಗಣನೀಯವಾಗಿ ಹೆಚ್ಚಾಗಿದ್ದು ಈ ಹಿನ್ನೆಲೆಯಲ್ಲಿ ಜಲಾಶಯದ ನೀರಿನ ಸಂಗ್ರಹಮಟ್ಟ ಕಾಯ್ದುಕೊಂಡು ೧೭ ಗೇಟ್‌ಗಳ ಮೂಲಕ ೫೧೪೭೫ ಕ್ಯೂಸೆಕ್ ನೀರು ಕೃಷ್ಣೆ ಬಿಡಲಾಗಿದೆ.

ಜಲಾಶಯದಿಂದ ಕೃಷ್ಣೆಗೆ ದಿನದಿಂದ ದಿನಕ್ಕೆ ನೀರಿನ ಪ್ರಮಾಣ ಹೆಚ್ಚಾಗುತ್ತಿರುವುದರಿಂದ ಯಾದಗಿರಿ ಮತ್ತು ರಾಯಚೂರು ಜಿಲ್ಲಾಡಳಿತ ನದಿ ತೀರದ ಗ್ರಾಮಗಳ ಜನರಿಗೆ ಜಾಗೃತಿಯಿಂದ ಇರಲು ಎಚ್ಚರಿಕೆ ನೀಡಿದ್ದು, ಈಗಾಗಲೇ ಜಿಲ್ಲಾಡಳಿತ ಪ್ರವಾಹ ಪರಿಸ್ಥಿತಿ ನಿಭಾಯಿಸಲು ಅಗತ್ಯ ಸಿದ್ಧತೆ ಮಾಡಿಕೊಂಡಿದೆ ಎಂದು ಹುಣಸಗಿ ತಹಸೀಲ್ದಾರ್ ಹುಸೇನ್‌ಸಾಬ್ ಸರಕಾವಸ್ ಮಾಹಿತಿ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net