ಬಸವೇಶ್ವರ ದರ್ಶನಕ್ಕೆ ಬಂದ ಭಕ್ತ ಸಾಗರ

ydg01
Published on

ಕೊಡೇಕಲ್: ಶ್ರಾವಣ ಮಾಸದ ಕೊನೆಯ ಸೋಮವಾರ ಕೊಡೇಕಲ್ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನಕ್ಕೆ ಜಿಲ್ಲೆ ಸೇರಿ ವಿವಿಧೆಡೆಯಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು.

ಪವಿತ್ರ ಶ್ರಾವಣ ಮಾಸದ ಕೊನೆಯ ಸೋಮವಾರ ಬೆಳಗ್ಗೆಯಿಂದಲೆ ಗ್ರಾಮದಲ್ಲಿರುವ ಎರಡು ಬಸವೇಶ್ವರ ದೇವಸ್ಥಾನಗಳಿಗೆ ಭಕ್ತರು ತಂಡೋಪ ತಂಡವಾಗಿ ಆಗಮಿಸುವ ಮೂಲಕ ತಮ್ಮ ಹರಕೆ ಸಲ್ಲಿಸುವುದರೊಂದಿಗೆ ವಿಶೇಷ ಪೂಜೆ ಸಲ್ಲಿಸಿದರು.

ದೇವರ ದರ್ಶನ ಪಡೆಯಲು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರಿಂದ ಕೆಲ ಹೊತ್ತು ನೂಕು-ನುಗ್ಗಲು ಉಂಟಾಯಿತು. ದೇವಸ್ಥಾನದಲ್ಲಿ ಮೂಲಸೌಕರ್ಯವಿಲ್ಲದ ಕಾರಣ ಕೆಲ ಭಕ್ತರು ಪರದಾಡುವಂತಾಗಿದೆ. ರಾಜ್ಯ ಹೆದ್ದಾರಿಯಲ್ಲಿ ಟ್ರಾಫೀಕ್ ಸಮಸ್ಯೆ ಉಂಟಾಗಿ ಪೊಲೀಸರು ಟ್ರಾಫಿಕ್ ನಿಯಂತ್ರಣಕ್ಕಾಗಿ ಹರಸಾಹಸ ಪಡಬೇಕಾಯಿತು. ಗ್ರಾಮದ ಪ್ಯಾಟಿ ಬಸವೇಶ್ವರ ದೇವಸ್ಥಾನದಲ್ಲಿ ಭಕ್ತರಿಗೆ ಮಾದಲಿ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net