

ಹಲಗೂರು: ಸಮೀಪದ ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿರುವ ಶ್ರೀಬಸವೇಶ್ವರ ದೇವಸ್ಥಾನದಲ್ಲಿ ಭಾನುವಾರ ಬೆಳಗಿನ ಜಾವ ದೇವಸ್ಥಾನದ ಬೀಗ ಒಡೆದು ಒಳ ನುಗ್ಗಿದ ಕಳ್ಳರು ಲಕ್ಷಾಂತರ ರೂ.ಬೆಲೆ ಬಾಳುವ ಬೆಳ್ಳಿಯ ಪೂಜಾ ಸಾಮಗ್ರಿಗಳನ್ನು ಕದ್ದೊಯ್ದಿದ್ದಾರೆ.
ಎಂದಿನಂತೆ ಭಾನುವಾರ ಅರ್ಚಕ ರುದ್ರಸ್ವಾಮಿ ದೇವಸ್ಥಾನಕ್ಕೆ ಬಂದಾಗ ಬೀಗ ಒಡೆದಿರುವುದನ್ನು ಕಂಡು ತಕ್ಷಣ ಹಲಗೂರು ಪೊಲೀಸ್ ಠಾಣೆಗೆ ವಿಷಯ ತಿಳಿಸಿದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.