ಬಸ್ ಉರುಳಿ ಹತ್ತು ಮಕ್ಕಳಿಗೆ ಗಾಯ

mysore
Published on

ಮೈಸೂರು: ನಗರದ ಟಿಪ್ಪು ವೃತ್ತದ ಬಳಿ  ಪ್ರವಾಸಿ ಬಸ್ ಉರುಳಿ ಬಿದ್ದ ಪರಿಣಾಮ 10 ಶಾಲಾ ಮಕ್ಕಳಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಬೆಳಗಾವಿ ಜಿಲ್ಲೆಯ ಖಾನಾಪುರದ ಶಾಂತಿನಿಕೇತನ ಶಾಲೆಯ ಮಕ್ಕಳನ್ನು ಗೋಕಾಕ್‌ನಿಂದ ಮೈಸೂರಿಗೆ ಕರೆದುಕೊಂಡು ಬರುತ್ತಿದ್ದ ಬಸ್, ಸಂಜೆ 7 ಗಂಟೆ ಸುವಾರಿಗೆ ರಸ್ತೆ ವಿಭಜಕ್ಕೆ ಡಿಕ್ಕಿ ಹೊಡೆದು ಉರುಳಿ ಬಿದ್ದಿದೆ. ಬಸ್‌ನಲ್ಲಿ 38ಕ್ಕೂ ಹೆಚ್ಚು ಮಕ್ಕಳಿದ್ದರು. ಈ ಪೈಕಿ 10 ಮಕ್ಕಳಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಟನೆ ನಡೆದ ತಕ್ಷಣ ಸ್ಥಳದಲ್ಲಿದ್ದ ಸಾರ್ವಜನಿಕರು ಪೊಲೀಸರಿಗೆ ವಾಹಿತಿ ತಿಳಿಸಿದ್ದಾರೆ. ಟನಾ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಸಾರ್ವಜನಿಕರ ಸಹಾಯದಿಂದ ಬಸ್‌ನೊಳಗೆ ಸಿಲುಕಿದ್ದ ಮಕ್ಕಳನ್ನು ರಕ್ಷಿಸಿದರು.

ಕೆ.ಆರ್. ಆಸ್ಪತ್ರೆ ಸೇರಿದಂತೆ ನಗರದ ವಿವಿಧ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಅದೃಷ್ಟವಶಾತ್ ಯಾರಿಗೂ ಗಂಭೀರ ಗಾಯಗಳಾಗಿಲ್ಲ.

ಗೋಕಾಕ್‌ನಿಂದ ಮೈಸೂರಿಗೆ ಬಂದಿದ್ದ ಶಾಲಾ ಮಕ್ಕಳು ಶ್ರೀರಂಗಪಟ್ಟಣ, ಕೆಆರ್‌ಎಸ್‌ನ ಬಂದಾವನ ಉದ್ಯಾನವನ್ನು ವೀಕ್ಷಿಸಿ ಸಂಜೆ ಹೊತ್ತಿಗೆ ನಗರಕ್ಕೆ ಬರುತ್ತಿದ್ದ ಸಂದರ್ಭದಲ್ಲಿ ಈ ಟನೆ ಸಂಭವಿಸಿದೆ.

ಸ್ಥಳಕ್ಕೆ ಮೈಸೂರು ನಗರ ಪೊಲೀಸ್ ಆಯುಕ್ತೆ ಸೀವಾ ಲಾಟ್ಕರ್, ಸಂಚಾರ ವಿಭಾಗದ ಎಸಿಪಿ ಪರಶುರಾಮಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಗರದ ಎನ್.ಆರ್. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಸ್ ಉರುಳಿ 20 ಪ್ರಯಾಣಿಕರಿಗೆ ಗಾಯ

ಮೈಸೂರು ನಂಜನಗೂಡು ರಸ್ತೆಯ ಉಂಡಬತ್ತಿ ಕೆರೆ ಹತ್ತಿರ ಮಂಗಳವಾರ ರಾತ್ರಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ವಿಭಜಕ್ಕೆ ಡಿಕ್ಕಿ ಹೊಡೆದು ಜಮೀನಿಗೆ ಉರುಳಿ ಬಿದ್ದಿದೆ.

ಬಸ್‌ನಲ್ಲಿ ಅಂದಾಜು 20 ಪ್ರಯಾಣಿಕರಿದ್ದರು. ಅವರಲ್ಲಿ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಯಾರಿಗೂ ತೊಂದರೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಪಲ್ಟಿ ಆಗಿರುವ ಕೆಎಸ್‌ಆರ್‌ಟಿಸಿ ಬಸ್ ಮೈಸೂರಿನಿಂದ ಚಾಮರಾಜನಗರಕ್ಕೆ ತೆರಳುತ್ತಿತ್ತು.

ಬಸ್‌ನಲ್ಲಿ ಸಿಲುಕಿದ್ದ ಜನರನ್ನು ಬೇರೆ ಬಸ್ ಮೂಲಕ ಕಳುಹಿಸಿಕೊಡಲಾಗಿದೆ. ಬಳಿಕ ಹಳ್ಳದಲ್ಲಿದ್ದ ಬಸ್ ಮೇಲಕ್ಕೆತ್ತಲಾಗಿದೆ. ಮೈಸೂರು ಗ್ರಾವಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net