ಮಂಗಳೂರು: ಕೆಎಸ್ ಆರ್ ಟಿಸಿ ಬಸ್ ಚಾಲಕನ ಕೊಲೆಗೆ ಯತ್ನಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಅಡ್ಯಾರ್ ಕಣ್ಣೂರು ನಿವಾಸಿ ಸೋಹಿಫ್ ಬಂಧಿತ ಆರೋಪಿ. ಈತ ಪುತ್ತೂರಿನಿಂದ ಸ್ಟೇಟ್ ಬ್ಯಾಂಕ್ ಕಡೆಗೆ ರಾಜು ಗಜಕೋಶ ಎಂಬವರು ಬಸ್ ಚಲಾಯಿಸಿಕೊಂಡು ಬರುತ್ತಿದ್ದಾಗ ಅಡ್ಯಾರ್ ಬಳಿ ಸ್ಕೂಟರ್ ಬಸ್ ಗೆ ಅಡ್ಡ ಇಟ್ಟು ಚಾಲಕನನ್ನು ಎಳೆದು ಹಾಕಿ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ್ದ. ಕಂಕನಾಡಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತಕ್ಷಣ ಆರೋಪಿಯನ್ನು ಬಂಧಿಸಿದ್ದಾರೆ.