ಬಸ್ ಟರ್ವಿುನಲ್​ನಲ್ಲಿ ಚರಂಡಿ ನೀರು

h1-Bus stand
Published on

ಹುಬ್ಬಳ್ಳಿ: ನಗರದ ಹೊಸೂರು ಬಸ್ ಟರ್ವಿುನಲ್​ನ ಮುಖ್ಯದ್ವಾರದಲ್ಲಿ ಕಳೆದ 3 ದಿನಗಳಿಂದ ಒಳಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ಸುತ್ತಲಿನ ಪ್ರದೇಶ ದುರ್ವಾಸನೆಯಿಂದ ಕೂಡಿದೆ. ಬಸ್ ನಿಲ್ದಾಣದೊಳಗೆ ಪ್ರವೇಶಿಸುವ ಪ್ರಯಾಣಿಕರು ಚರಂಡಿ ನೀರು ತುಳಿದುಕೊಂಡೇ ಬರಬೇಕಾದ ಅನಿವಾರ್ಯತೆ ಇದೆ. ಹೀಗಾಗಿ ನಿಲ್ದಾಣದಲ್ಲಿ ಪ್ರಯಾಣಿಕರು ಮೂಗು ಮುಚ್ಚಿಕೊಂಡು ಓಡಾಡುವ ದುಸ್ಥಿತಿ ಇದೆ. ಈ ಮಧ್ಯೆ ನಿಲ್ದಾಣದಲ್ಲಿ ವಿದ್ಯುತ್ ದೀಪಗಳು ಸರಿಯಾಗಿ ಕೆಲಸ ಮಾಡದ ಕಾರಣ ವೃದ್ಧರು, ಮಕ್ಕಳು ತೊಂದರೆ ಅನುಭವಿಸುವಂತಾಗಿದೆ. ಸಾರಿಗೆ ಅಧಿಕಾರಿಗಳು ಈ ಕುರಿತು ಗಮನ ಹರಿಸಿ ನಿಲ್ದಾಣದಲ್ಲಿ ಸ್ವಚ್ಛತೆ ಕಾಯ್ದುಕೊಳ್ಳುವ ಜತೆಗೆ ಅಗತ್ಯ ಬೆಳಕಿನ ವ್ಯವಸ್ಥೆ ಮಾಡುವಂತೆ ಸಾರ್ವಜನಿಕರು ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net