

ಅರಕಲಗೂಡು: ತಾಲೂಕಿನ ಸರಗೂರು- ಸಿದ್ದಾಪುರ ಬಳಿ ಆಟೋ ಮತ್ತು ಕೆಎಸ್‌ಆರ್‌ಟಿಸಿ ಬಸ್ ನಡುವೆ ಡಿಕ್ಕಿ ಸಂಭವಿಸಿ ನಾಲ್ವರು ಗಾಯಗೊಂಡಿದ್ದಾರೆ.
ಸರಗೂರು ಮತ್ತು ಸಿದ್ಧಾಪುರ ನಡುವಿನ ಹಾಸನ- ಮಡಿಕೇರಿ ರಸ್ತೆಯಲ್ಲಿ ಶುಕ್ರವಾರ ಸಂಜೆ ಸಿದ್ದಾಪುರ ಕಡೆಯಿಂದ ಬರುತ್ತಿದ್ದ ಆಟೋಗೆ ರಾಮನಾಥಪುರದಿಂದ ಸೋಮವಾರಪೇಟೆ ಮಾರ್ಗವಾಗಿ ಹೋಗುತ್ತಿದ್ದ ಬಸ್ ಡಿಕ್ಕಿ ಹೊಡೆದು ರಸ್ತೆಯಲ್ಲಿ ಉರುಳಿಬಿದ್ದಿದೆ. ಪರಿಣಾಮ ಆಟೋ ಚಾಲಕ, ಆಟೋದಲ್ಲಿದ್ದ ಮಹಿಳೆ ಮತ್ತು ಇಬ್ಬರು ಪುರುಷರಿಗೆ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.
ಆಟೋ ಜಖಂ ಆಗಿದೆ. ಕೊಣನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.