ಬಸ್ ಡಿಕ್ಕಿಯಾಗಿ ಮೊಪೆಡ್ ಸವಾರ ಸಾವು

Crime Logo
Published on

ಯಳಂದೂರು: ಪಟ್ಟಣದ ರಾಷ್ಟ್ರೀಯ ಹೆದ್ದಾರಿ 948 ರ ಬೈಪಾಸ್ ರಸ್ತೆಯ ಅರಣ್ಯ ಇಲಾಖೆಯ ಸರ್ಕಲ್ ಬಳಿ ಶುಕ್ರವಾರ ಮೊಪೆಡ್‌ಗೆ ಬಸ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಯಳಂದೂರು ತಾಲೂಕಿನ ಗೌಡಹಳ್ಳಿ ಗ್ರಾಮದ ಮಾದೇಗೌಡ (58) ಮೃತ. ಮೊಪೆಡ್‌ನಲ್ಲಿ ಬೈಪಾಸ್ ರಸ್ತೆಯಲ್ಲಿ ಬರುತ್ತಿದ್ದ ವೇಳೆ ಶಬರಿಮಲೆ ಯಾತ್ರಿಕರ ಬಸ್ ಚಾಮರಾಜನಗರದಿಂದ ಕೊಳ್ಳೇಗಾಲ ಮಾರ್ಗವಾಗಿ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದಾಗ ಡಿಕ್ಕಿ ಹೊಡೆದಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net