ಬಸ್ ತಂಗುದಾಣ ಉದ್ಘಾಟನೆ

Oplus_16908288
Oplus_16908288
Published on

ವಿರಾಜಪೇಟೆ: ವಿರಾಜಪೇಟೆ ನಗರದ ನಿಸರ್ಗ ಲೇಔಟ್‌ನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಬಸ್ ತಂಗುದಾಣವನ್ನು ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಶನಿವಾರ ಉದ್ಘಾಟಿಸಿದರು.

ನಿಸರ್ಗ ಲೇಔಟ್ ಹಾಗೂ ಅದರ ಸಮೀಪದ ಬಸ್ ಪ್ರಯಾಣಿಕರಿಗೆ ಅನುಕೂಲವಾಗಲೆಂದು ಈ ತಂಗುದಾಣವನ್ನು ನಿರ್ಮಾಣ ಮಾಡಲಾಗಿದೆ. ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ಸಲಹೆ ನೀಡಿದರು.

ಅದೇ ರೀತಿ ಸಂಬಂಧಪಟ್ಟವರು ಈ ತಂಗುದಾಣದಲ್ಲಿ ಶುಚಿತ್ವ ಕಾಪಾಡುವುದರೊಂದಿಗೆ ಜನಸಾಮಾನ್ಯರಿಗೆ ಇಲ್ಲಿ ಇರಲು ಪೂರಕವಾದ ವಾತಾವರಣ ನಿರ್ಮಿಸುವ ಬಗ್ಗೆ ಗಮನಹರಿಸಬೇಕೆಂದು ಸಲಹೆ ನೀಡಿದರು.

ಕೊಡಗು ಜಿಲ್ಲಾ ಗ್ಯಾರಂಟಿ ಅನುಷ್ಠಾನದ ಅಧ್ಯಕ್ಷ ಧರ್ಮಜ ಉತ್ತಪ್ಪ, ಪುರಸಭೆ ಅಧ್ಯಕ್ಷೆ ದೇಚಮ್ಮ ಕಾಳಪ್ಪ, ಪುರಸಭೆ ಸದಸ್ಯ ಮತೀನ್, ಪುರಸಭೆ ಮುಖ್ಯಾಧಿಕಾರಿ ನಾಚಪ್ಪ, ನಿಸರ್ಗ ಲೇಔಟ್‌ನ ನಿವಾಸಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net