ಬಸ್ ನಿಲುಗಡೆಗೆ ಅವಕಾಶ ಕಲ್ಪಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

ಬಸ್ ನಿಲುಗಡೆಗೆ ಅವಕಾಶ ಕಲ್ಪಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ
Published on

ಅರಸೀಕೆರೆ: ಮಾರ್ಗವಾಗಿ ಮೈಸೂರಿಗೆ ಪ್ರತಿನಿತ್ಯ ಸಂಚರಿಸುವ ಬಸ್ ನಿಲುಗಡೆಗೆ ಅವಕಾಶ ಕಲ್ಪಿಸುವಂತೆ ಒತ್ತಾಯಿಸಿ ಮುದುಡಿ ಗ್ರಾಮದಲ್ಲಿ ಶಾಲಾ, ಕಾಲೇಜು ವಿದ್ಯಾರ್ಥಿಗಳು ಚಿತ್ರದುರ್ಗ ಡಿಪೋ ಬಸ್ ತಡೆದು ಗುರುವಾರ ಕೆಲ ಕಾಲ ದಿಢೀರ್ ಪ್ರತಿಭಟನೆ ನಡೆಸಿದರು.

ಇದರಿಂದಾಗಿ ದೂರದ ಊರುಗಳಿಗೆ ಸಂಚರಿಸುವ ಪ್ರಯಾಣಿಕರು ಪರದಾಡುವಂತಾಗಿತ್ತು. ವಿದ್ಯಾರ್ಥಿ ಮುಖಂಡ ದರ್ಶನ್ ಮಾತನಾಡಿ, ಚನ್ನರಾಯಪಟ್ಟಣ, ಗಂಡಸಿ, ಹಾಸನ ಸೇರಿ ವಿವಿಧೆಡೆ ವ್ಯಾಸಂಗಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ಅರಸೀಕೆರೆ ಮಾರ್ಗವಾಗಿ ಮೈಸೂರಿಗೆ ಸಂಚರಿಸುವ ಚಿತ್ರದುರ್ಗ ಒಳಗೊಂಡಂತೆ ಹಲವು ಡಿಪೋಗಳ ಬಸ್ಸುಗಳು ನಿಗದಿತ ಸಮಯದಲ್ಲಿ ನಿಲುಗಡೆಯಾಗುತ್ತಿಲ್ಲ. ಇದರಿಂದ ನಿತ್ಯ ಸಮಸ್ಯೆ ಎದುರಾಗಿದ್ದು ಗೋಳು ಹೇಳತೀರದಾಗಿದೆ.ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಮಾಡಿದರು ಯಾವುದೇ ಪ್ರಯೋಜನವಾಗಿಲ್ಲ. ಚುನಾಯಿತ ಜನಪ್ರತಿನಿಧಿಗಳು ಹಾಗೂ ಸಾರಿಗೆ ಇಲಾಖೆಯ ಉನ್ನತಾಧಿಕಾರಿಗಳು ತಕ್ಷಣವೇ ಇತ್ತ ಗಮನಹರಿಸಿ ಅನುಕೂಲ ಕಲ್ಪಿಸಿಕೊಡಬೇಕು ಎಂದು ಆಗ್ರಹಿಸಿದರು.

ಸಯ್ಯದ್ ಮೂಸೀನ್, ದರ್ಶನ್ ನಾಯ್ಕ, ಪುನೀತ್ ಸೇರಿ ಹಲವರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net