ಬಸ್​ ನಿಲ್ದಾಣ ಕಾಮಗಾರಿ ಮುಗಿಸಲಿ

6
Published on

ಬೆಳಗಾವಿ: ನಗರದಲ್ಲಿ ಸ್ಮಾರ್ಟ್​ಸಿಟಿ ಯೋಜನೆಯಡಿ ನಿರ್ಮಾಣ ಹಂತದಲ್ಲಿರುವ ಬಸ್​ ನಿಲ್ದಾಣ ಕಟ್ಟಡ ಕಾಮಗಾರಿಯಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವುದು ಸರಿಯಲ್ಲ. ಸಕಾಲಕ್ಕೆ ಪೂರ್ಣಗೊಳಿಸಬೇಕು ಎಂದು ಸ್ಮಾರ್ಟ್​ ಸಿಟಿ ಅಧಿಕಾರಿಗಳಿಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಕಾ ಎಂ. ಎಚ್ಚರಿಸಿದರು.

ನಗರದ ಕೇಂದ್ರ ಬಸ್​ ನಿಲ್ದಾಣ, ನಿರ್ಮಾಣ ಹಂತದ ಕಾಮಗಾರಿಗಳನ್ನು ವೀಕ್ಷಿಸಿ ಮಾತನಾಡಿದ ಅವರು, ಹಲವು ವರ್ಷಗಳಿಂದ ಸ್ಮಾರ್ಟ್​ಸಿಟಿ ಯೋಜನೆಯಡಿ ನಿಲ್ದಾಣ ನಿರ್ಮಾಣ ಕೈಗೆತ್ತಿಕೊಳ್ಳಲಾಗಿದೆ. ಆದರೆ, ಇಲ್ಲಿಯವರೆಗೆ ಕಾಮಗಾರಿ ಮುಗಿಯುತ್ತಿಲ್ಲ. ಎಲ್ಲವೂ ಅರ್ಧಂರ್ಬದ ಆಗಿವೆ. ಕೂಡಲೇ ಕಾಮಗಾರಿಗಳ ವೇಗೆ ಹೆಚ್ಚಿಸಬೇಕು ಎಂದು ಸೂಚಿಸಿದರು. ಕೇಂದ್ರ ಬಸ್​ ನಿಲ್ದಾಣದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವುದರ ಜತೆಗೆ ಪ್ರಯಾಣಿಕರಿಗೆ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು. ವಿದ್ಯಾರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಪಾಸ್​ ಕೌಂಟರ್​ ನಿರ್ವಹಣೆ ಮಾಡಬೇಕು. ಕಳ್ಳತನ ಸೇರಿ ಇತರ ಅಪರಾಧ ಪ್ರಕರಣ ತಡೆಗೆ ಭದ್ರತೆ ಕೈಗೊಳ್ಳಬೇಕು. ರ್ನಿಲಕ್ಷ ಮಾಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದರು. ಸ್ಮಾರ್ಟ್​ ಸಿಟಿ ವ್ಯವಸ್ಥಾಪಕ ನಿರ್ದೇಶಕಿ ಸಯೀದಾ ಆಫ್ರೀನ್​ ಭಾನು ಎಸ್​.ಬಳ್ಳಾರಿ, ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ ಹುದ್ದಾರ, ಗುತ್ತಿಗೆದಾರರು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net