ಬಸ್ ನಿಲ್ದಾಣ ಕಾಮಗಾರಿ ಶೀಘ್ರ ಮುಕ್ತಾಯ

24mnd2
Published on

ಮುಂಡಗೋಡ: ಪಟ್ಟಣದ ಬಸ್ ನಿಲ್ದಾಣ ನಿರ್ಮಾಣ ಕಾಮಗಾರಿಯನ್ನು ವಾಕರಸಾ ಸಂಸ್ಥೆ ಅಧ್ಯಕ್ಷ ವಿ.ಎಸ್. ಪಾಟೀಲ ಶುಕ್ರವಾರ ಪರಿಶೀಲಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಮಗಾರಿಯನ್ನು ಶೀಘ್ರ ಮುಗಿಸಲು ಇಂಜಿನಿಯರ್ ಮತ್ತು ಗುತ್ತಿಗೆದಾರರಿಗೆ ತಿಳಿಸಲಾಗಿದೆ. ಲಾಕ್​ಡೌನ್ ಹಾಗೂ ಕೆಲಸಗಾರರ ಸಮಸ್ಯೆಯಿಂದ ವಿಳಂಬವಾಗಿದೆ. ನಮ್ಮ ಸಂಸ್ಥೆ ನಷ್ಟದಲ್ಲಿರುವುದರಿಂದ ಗುತ್ತಿಗೆದಾರರಿಗೆ ಹಣ ಸಂದಾಯ ಮಾಡುವುದು ಬಾಕಿ ಇದೆ. ಸದ್ಯ ನಿರ್ವಣವಾಗುತ್ತಿರುವ ಕಟ್ಟಡದ ಮೊದಲ ಮಹಡಿಯಲ್ಲಿ ಸಾಕಷ್ಟು ಸ್ಥಳವಿದ್ದು ಬ್ಯಾಂಕ್ ಅಥವಾ ಇನ್ನಿತರ ಉದ್ಯಮಗಳಿಗೆ ಬಾಡಿಗೆಗೆ ನೀಡಲು ಅವಕಾಶವಿದೆ. ಅರಣ್ಯ ಇಲಾಖೆಯಿಂದ ಅನುಮತಿ ದೊರೆತ ತಕ್ಷಣ ಬಸ್ ಡಿಪೋ ಕಾಮಗಾರಿಗೆ ಭೂಮಿ ಪೂಜೆ ಮಾಡಲಾಗುವುದು ಎಂದರು. ಈ ವೇಳೆ ಶಿರಸಿ ಎಇಇ ಎನ್.ವಿ. ಶಿವಮೂರ್ತಿ, ಜೂನಿಯರ್ ಇಂಜಿನಿಯರ್ ರಾಮದಾಸ ಇದ್ದರು.

ಸಚಿವ ಶಿವರಾಮ ಹೆಬ್ಬಾರ ಮತ್ತು ವಾಕರಸಾ ಸಂಸ್ಥೆ ಅಧ್ಯಕ್ಷ ವಿ.ಎಸ್. ಪಾಟೀಲ ಬಿಲ್ ಪಾವತಿ ಮಾಡುವಂತೆ ಸಂಬಂಧಪಟ್ಟ ಸಚಿವರೊಂದಿಗೆ ಮಾತುಕತೆ ನಡೆಸಿದ್ದಾರೆ. ಲಾಕ್​ಡೌನ್​ನಿಂದ ಸಂಸ್ಥೆ ನಷ್ಟದಲ್ಲಿದ್ದು ಕಾಮಗಾರಿ ಹಣವನ್ನು ಸಿಬ್ಬಂದಿ ವೇತನಕ್ಕಾಗಿ ಬಳಸಿಕೊಂಡಿದ್ದೇವೆ. ಕಾಲ-ಕಾಲಕ್ಕೆ ಹಣ ಸಂದಾಯ ಮಾಡುವುದಾಗಿ ಅವರು ಆಶ್ವಾಸನೆ ನೀಡಿದ್ದಾರೆ. | ಬಿ.ಬಿ. ಪಾಟೀಲ ಗುತ್ತಿಗೆದಾರ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net