ಬಸ್‌ನಿಲ್ದಾಣದಲ್ಲಿ ಮೂಲಸೌಕರ್ಯಕ್ಕೆ ಆದ್ಯತೆ ನೀಡಲು ಒತ್ತಾಯ

5 ckm 6
ಚಿಕ್ಕಮಗಳೂರು ಕೆಎಸ್‌ಆರ್‌ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿಗೆ ಮನವಿ ಸಲ್ಲಿಸಿದ ಸಮಾಜ ಪರಿವರ್ತನಾ ಸಂಘದ ಮುಖಂಡರು ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ವಾಹನ ನಿಲುಗಡೆಯ ಅವ್ಯವಸ್ಥೆ ಹಾಗೂ ಸಾರ್ವಜನಿಕರ ತೊಂದರೆ ಸರಿಪಡಿಸಬೇಕು ಎಂದು ಒತ್ತಾಯಿಸಿದರು. ಆರ್.ಶ್ರೀನಿವಾಸ್, ಜಗದೀಶ್ ಕೋಟೆ, ಅಬ್ಬಾಸ್ ಅಹ್ಮದ್, ಹಿರೇಮಗಳೂರು ಈಶ್ವರ್, ಯಶವಂತ್, ಸುರೇಶ್, ಶೇಖರ್ ಮತ್ತಿತರರಿದ್ದರು.
Published on

ಚಿಕ್ಕಮಗಳೂರು: ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ವಾಹನ ನಿಲುಗಡೆಯ ಅವ್ಯವಸ್ಥೆ ಹಾಗೂ ಸಾರ್ವಜನಿಕರ ತೊಂದರೆ ಸರಿಪಡಿಸಬೇಕು ಎಂದು ಒತ್ತಾಯಿಸಿ ಸಮಾಜ ಪರಿವರ್ತನಾ ಸಂಘದ ಮುಖಂಡರು ಕೆಎಸ್‌ಆರ್‌ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿಗೆ ಮಂಗಳವಾರ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಸಂಘದ ಅಧ್ಯಕ್ಷ ಆರ್.ಶ್ರೀನಿವಾಸ್ ನಗರ ಸೇರಿದಂತೆ ಗ್ರಾಮೀಣ ಪ್ರದೇಶಗಳಿಂದ ಶಾಲೆ, ಆಸ್ಪತ್ರೆ, ತಾಲೂಕು ಕಚೇರಿ ಹಾಗೂ ಇನ್ನಿತರೆ ಕಚೇರಿಗಳಿಗೆ ಬರುವ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಹೆಚ್ಚಾಗಿ ಸರ್ಕಾರಿ ಬಸ್ ಸಂಚಾರವನ್ನು ಆಶ್ರಯಿಸಿದ್ದಾರೆ ಎಂದರು.

ಚಿಕ್ಕಮಗಳೂರು ಕೇಂದ್ರ ಬಸ್ ನಿಲ್ದಾಣದಲ್ಲಿ ವಾಹನಗಳ ನಿಲುಗಡೆ ಅವೈಜ್ಞಾನಿಕವಾಗಿದೆ. ಸಾರ್ವಜನಿಕರು ನಿಲ್ದಾಣದ ಒಳಗೆ ದ್ವಿಚಕ್ರ ಮತ್ತು ನಾಲ್ಕು ಚಕ್ರದ ವಾಹನಗಳನ್ನು ಅಡ್ಡಾದಿಡ್ಡಿ ನಿಲ್ಲಿಸುವ ಕಾರಣ ಪ್ರಯಾಣಿಕರು ಓಡಾಟಕ್ಕೆ ಪರದಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದರು.

ಬಸ್ ನಿಲ್ದಾಣದಲ್ಲಿ ಮೂಲಭೂತ ಸೌಕರ್ಯ, ನಿಲ್ದಾಣದ ಒಳಗೆ ಅಂಗಡಿಗಳಲ್ಲಿ ಶುಚಿತ್ವದ ಕೊರತೆ, ಸಿಹಿ ಹಾಗೂ ಆಹಾರ ಪದಾರ್ಥಗಳನ್ನು ಮುಚ್ಚಿಡದೇ ತೆರೆದಿರುವುದರಿಂದ ರೋಗ ಹರಡುವ ಸಾಧ್ಯತೆಗಳಿವೆ. ಅಲ್ಲದೇ ಅಂಗಡಿಗಳಲ್ಲಿ ಮಾರಾಟವಾಗುವ ಪದಾರ್ಥಗಳು ದುಬಾರಿಯಾಗಿವೆ ಎಂದು ಆರೋಪಿಸಿದರು.

ಸಂಘದ ಪ್ರಧಾನ ಕಾರ್ಯದರ್ಶಿ ಜಗದೀಶ್ ಕೋಟೆ ಮಾತನಾಡಿ, ಪ್ರಸ್ತುತ ಶೃಂಗಾರ್ ಹಾಗೂ ಹನುಮಂತಪ್ಪ ವೃತ್ತದಲ್ಲಿ ಬಸ್ ನಿಲುಗಡೆ ರದ್ದತಿಯಿಂದ ದೈನಂದಿನ ಸಂಚರಿಸುವ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಈ ಬಗ್ಗೆ ಪರಿಶೀಲನೆ ನಡೆಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಂಘದ ಸದಸ್ಯರಾದ ಅಬ್ಬಾಸ್ ಅಹ್ಮದ್, ಹಿರೇಮಗಳೂರು ಈಶ್ವರ್, ಯಶವಂತ್, ಸುರೇಶ್, ಶೇಖರ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net