ಬಹುಜನ ಚಳುವಳಿಗೆ ಫುಲೆ ದಂಪತಿಗಳೇ ಸ್ಪೂರ್ತಿ

IMG-20250103-WA0038
Published on

ಚಾಮರಾಜನಗರ: ಮಹಾತ್ಮ ಜ್ಯೋತಿ ಬಾ ಫುಲೆ ಮತ್ತು ಸಾವಿತ್ರಿ ಬಾಯಿ ಫುಲೆ ದಂಪತಿಗಳು ಬಹುಜನ ಚಳುವಳಿಯ ಸ್ಪೂರ್ತಿ ಯಾಗಿದ್ದಾರೆ ಎಂದು ಬಿಎಸ್ಪಿ ರಾಜ್ಯ ಕಾರ್ಯದರ್ಶಿ ಎನ್.ನಾಗಯ್ಯ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಬಹುಜನ ಸಮಾಜ ಪಕ್ಷದ ಜಿಲ್ಲಾ ಘಟಕದ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಮಾತೇ ಸಾವಿತ್ರಿ ಬಾಯಿ ಫುಲೆ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ದೇಶದ ಪ್ರಥಮ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಮತ್ತು ಜ್ಯೋತಿ ಬಾಯಿ ಫುಲೆ ಅವರನ್ನು ಬಹುಜನ ಚಳುವಳಿಯ ದಾದಾಸಾಹೇಬ್ ಕಾನ್ಶಿರಾಂ ಅವರು ಇಡೀ ಜಗತ್ತಿಗೆ ಪರಿಚಯಿಸಿದರು. ಈ ಮೂಲಕ ಇಡೀ ದೇಶ ಇವತ್ತು ಸಾವಿತ್ರಿ ಬಾಯಿ ಫುಲೆ ಜಯಂತಿಯನ್ನು ಆಚರಣೆ ಮಾಡುತ್ತಿದೆ. ಸಾವಿತ್ರಿ ಬಾಯಿ ಫುಲೆ ಅವರ ಚಿಂತನೆಗಳನ್ನು ಇಂದಿನ ಯುವಜನಾಂಗ ಮೈಗೂಡಿಸಿಕೊಂಡು ಸಾಗಬೇಕಿದೆ ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ರಾಜ್ಯ ಕಾರ್ಯಕಾರಣಿ ಸಮಿತಿ ಸದಸ್ಯ ಬ್ಯಾಡಮೂಡ್ಲು ಬಸವಣ್ಣ, ಜಿಲ್ಲಾಧ್ಯಕ್ಷ ಬ.ಮ.ಕೃಷ್ಣಮೂರ್ತಿ, ಜಿಲ್ಲಾ ಉಸ್ತುವಾರಿಗಳಾದ ಅಮಚವಾಡಿ ಪ್ರಕಾಶ್, ಚಂದಕವಾಡಿ ರಾಜಶೇಖರ್, ಜಿಲ್ಲಾ ಸಂಯೋಜಕ ವಕೀಲರಾದ ಪುಟ್ಟಸ್ವಾಮಿ ರಾಮಸಮುದ್ರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಪಿ.ಮಹೇಶ್, ಜಿಲ್ಲಾ ಕಾರ್ಯದರ್ಶಿ ಅಭಿ ಅರಳೀಪುರ, ಕೊಳ್ಳೇಗಾಲ ತಾಲೂಕು ಉಸ್ತುವಾರಿ ಮಣಿ, ತಾಲೂಕು ಅಧ್ಯಕ್ಷ ಸಿದ್ದಯ್ಯನಪುರ ಚಂದ್ರಕಾಂತ್, ಪ್ರಧಾನ ಕಾರ್ಯದರ್ಶಿ ಹೊಸಳ್ಳಿ ಸಿದ್ದರಾಜು, ಟೌನ್ ಅಧ್ಯಕ್ಷ ರಂಗಸ್ವಾಮಿ, ಬಿವಿಎಫ್ ಸಂಯೋಜಕ ನಾಗವಳ್ಳಿ ಜೈ ಸಿದ್ಧಾರ್ಥ, ರವಿ ಕುಮಾರ್, ಪ್ರಕಾಶ್ ಸಿದ್ದಯ್ಯನಪುರ ಹಾಗೂ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net