ಬಹುಮುಖ ಪ್ರತಿಭೆ ಹೊರತರಲು ಪ್ರತಿಭಾ ಕಾರಂಜಿ ಸಹಕಾರಿ

17 ckm 4
ಚಿಕ್ಕಮಗಳೂರು ತಾಲೂಕಿನ ಹಲಸುಮನೆ ಗ್ರಾಮದಲ್ಲಿ ಏರ್ಪಡಿಸಿದ್ಧ ವಸ್ತಾರೆ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಬಸ್ಕಲ್ ಗ್ರಾಮ ಪಂಚಾಯಿತಿ ಅಧ್ಯಕ್ಷ ಗೋಪಾಲಗೌಡ ಉದ್ಘಾಟಿಸಿದರು. ಎಚ್.ಸಿ.ರವೀಶ್, ಧರ್ಮೇಶ್, ಭವಾನಿ ಶಂಕರ್ ಮತ್ತಿತರರಿದ್ದರು.
Published on

ಚಿಕ್ಕಮಗಳೂರು: ಮಕ್ಕಳ ವಯೋಮಾನಕ್ಕನುಸಾರವಾಗಿ ವಿವಿಧ ಬಗೆಯ ಸ್ಪರ್ಧೆಗಳು ನಡೆಯುವುದರಿಂದ ಮಕ್ಕಳಲ್ಲಿರುವ ಬಹುಮುಖ ಪ್ರತಿಭೆಯನ್ನು ಹೊರತರಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ ಎಂದು ಬಸ್ಕಲ್ ಗ್ರಾಮ ಪಂಚಾಯಿತಿ ಅಧ್ಯಕ್ಷ ಗೋಪಾಲಗೌಡ ತಿಳಿಸಿದರು.

ಜಿಪಂ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ, ಹಲಸುಮನೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಬಸ್ಕಲ್ ಗ್ರಾಪಂ ಸಹಯೋಗದಲ್ಲಿ ತಾಲೂಕಿನ ಹಲಸುಮನೆ ಗ್ರಾಮದಲ್ಲಿ ಏರ್ಪಡಿಸಿದ್ಧ ವಸ್ತಾರೆ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸಾಂಸ್ಕೃತಿಕ ಚಟುವಟಿಕೆಗಳು ಹಿಂದೆ ಕೇವಲ ನಗರ ಪ್ರದೇಶಗಳಲ್ಲಿರುವ ಖಾಸಗಿ ಶಾಲೆಗಳಲ್ಲಿ ಮಾತ್ರ ನಡೆಯುತ್ತಿತ್ತು. ಆದರೆ ಸರ್ಕಾರ ಇದನ್ನು ಮನಗಂಡು, ಗ್ರಾಮಾಂತರ ಪ್ರದೇಶದ ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತೆಗೆಯಲಿಕ್ಕೆ ಗ್ರಾಮೀಣ ಶಾಲೆಗಳಿಗೂ ವಿಸ್ತರಿಸಿ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಅನುಷ್ಠಾನ ಮಾಡಿದೆ ಎಂದರು.

ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರ ತೆಗೆಯಲು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಅನುಕೂಲವಾಗಿದೆ. ಜನಪದ ಗೀತೆ, ಭಾವಗೀತೆ, ಭಕ್ತಿ ಗೀತೆ, ಸಮೂಹ ನೃತ್ಯ, ಕೋಲಾಟ, ಛದ್ಮ ವೇಷ, ಜನಪದ ನೃತ್ಯ ಸೇರಿದಂತೆ ಮುಂದಾದ ಚಟುವಟಿಕೆಗಳನ್ನು ವಿದ್ಯಾರ್ಥಿಗಳಿಗೆ ಏರ್ಪಡಿಸಿ ಶೈಕ್ಷಣಿಕ ಬೆಳವಣಿಗೆಗೆ ಸಹಕರಿಸುತ್ತಿದೆ ಎಂದು ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಸಿ.ರವೀಶ್ ಮಾತನಾಡಿ, ಮಕ್ಕಳ ಮುಂದಿನ ಭವಿಷ್ಯದಲ್ಲಿ ಯಾವ ಕ್ಷೇತ್ರದಲ್ಲಿ ಉತ್ತಮ ಆಸಕ್ತಿ ಹೊಂದಿದ್ದಾರೆ ಎಂಬುದನ್ನು ಗುರುತಿಸಲು ಪ್ರತಿಭಾ ಕಾರಂಜಿ ಪೂರಕವಾಗುತ್ತದೆ. ಅಷ್ಟೇ ಅಲ್ಲದೆ ಪಾಠಗಳನ್ನು ಆಲಿಸುವ ಮಕ್ಕಳಿಗೆ ಇದರಿಂದ ಹೊಸತನ ದೊರೆಯಲಿದೆ ಎಂದರು.

ತಾಲೂಕು ಮಟ್ಟ, ಜಿಲ್ಲಾ ಮಟ್ಟ, ರಾಜ್ಯ ಮಟ್ಟ ಹೀಗೆ ಹಲವಾರು ಹಂತಗಳಲ್ಲಿ ಗೆದ್ದ ವಿದ್ಯಾರ್ಥಿಗಳು ಮುಂದಿನ ಸ್ಪರ್ಧೆಗೆ ಸಜ್ಜಾಗುತ್ತಾರೆ. ಇದರಲ್ಲಿ ಗುಂಪು ಮತ್ತು ವೈಯಕ್ತಿಕ ಎರಡೂ ರೀತಿಯ ಸ್ಪರ್ಧೆಗಳು ನಡೆಯುತ್ತವೆ. ಮಕ್ಕಳು ತಮ್ಮ ಕೌಶಲ್ಯಗಳನ್ನು ಇಲ್ಲಿ ಪ್ರದರ್ಶಿಸಲು ಇದೊಂದು ಉತ್ತಮ ವೇದಿಕೆಯಾಗಿದೆ ಎಂದು ತಿಳಿಸಿದರು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಧರ್ಮೇಶ್ ಮಾತನಾಡಿ, ಮಕ್ಕಳಲ್ಲಿ ಅನೇಕ ಪ್ರತಿಭೆಗಳು ಅಡಗಿದ್ದು, ಅವುಗಳನ್ನು ಹೊರಹೊಮ್ಮಿಸಲು ಇಂಥಹ ಕಾರ್ಯಕ್ರಮ ಸೂಕ್ತ ವೇದಿಕೆಯಾಗಿದೆ. ತರಗತಿಯಲ್ಲಿನ ಕಲಿಕೆಯೊಂದಿಗೆ ಚಟುವಟಿಕೆಗಳಲ್ಲಿ ಆಸಕ್ತಿಯಿರುವ ಕ್ಷೇತ್ರಗಳತ್ತ ಗಮನಹರಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕೂದುವಳ್ಳಿ ಸೊಸೈಟಿ ಅಧ್ಯಕ್ಷ ಭವಾನಿ ಶಂಕರ್, ನಿರ್ದೇಶಕ ವಿ.ಡಿ.ಕೌಶಿಕ್, ಬಸ್ಕಲ್ ಗ್ರಾಪಂ ಸದಸ್ಯರಾದ ಲಲಿತಮ್ಮ, ನಂದಿನಿ, ಪ್ರಶಾಂತ್, ಶಾಲೆಯ ಮುಖ್ಯಶಿಕ್ಷಕ ರುದ್ರೇಗೌಡ, ಸಹ ಶಿಕ್ಷಕ ರಮೇಶ್, ಗ್ರಾಮಸ್ಥರಾದ ಲೋಕೇಶ್‌ಗೌಡ, ಎಚ್.ಎಸ್.ಕುಮಾರ್, ಹರೀಶ್, ನಾಗೇಶ್, ಕುಮಾರೇಗೌಡ, ಎಚ್.ಪಿ.ಸುರೇಶ್, ಸತೀಶ್, ಲಕ್ಷö್ಮಣ್, ಸುರೇಶ್, ಉಮೇಶ್, ಅಜಿತ್, ಶಶಿ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net