

ಬೆಳಗಾವಿ: ಹಿಂಸಾಚಾರ ಪೀಡಿತ ಬಾಂಗ್ಲಾದೇಶದಲ್ಲಿ ಹಿಂದುಗಳು ಹಾಗೂ ಅವರ ಆಸ್ತಿ&ಪಾಸ್ತಿ, ಮಂದಿರಗಳ ಮೇಲೆ ದಾಳಿಯಾಗುತ್ತಿದೆ. ಕೇಂದ್ರ ಸರ್ಕಾರ ಅವರ ರಣೆಗೆ ಮುಂದಾಗಬೇಕು ಎಂದು ಒತ್ತಾಯಿಸಿ ಶ್ರೀರಾಮಸೇನೆ ಸಂಟನೆಯಿಂದ ಸೋಮವಾರ ನಗರದಲ್ಲಿ ಪ್ರತಿಭಟಿಸಲಾಯಿತು.
ನಗರದ ಚನ್ನಮ್ಮ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಬಾಂಗ್ಲಾ ದೇಶದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ, ದೇವಸ್ತಾನಗಳ ಮೇಲೆ ದಾಳಿಯಾಗುತ್ತಿದ್ದರು. ಕೇಂದ್ರ ಸರ್ಕಾರ ಮೌನ ವಹಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಶ್ರೀರಾಮಸೇಬೆ ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಮಾತನಾಡಿ, ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ನಡೆದರೆ ಕೇಂದ್ರದ ಬಿಜೆಪಿ ಸರ್ಕಾರ ರಕ್ಷಿಸದೆ ಸುಮ್ಮನಿದೆ. ನೆರೆಯ ರಾಷ್ಟ್ರದಲ್ಲಿ ಹಿಂದುಗಳ ಮಾರಣಹೋಮ ನಡೆಯುತ್ತಿದ್ದರೂ ಕೈಕಟ್ಟಿ ಕುಳಿತ್ತಿದ್ದೇವೆ. ಕರ್ನಾಟಕದಲ್ಲಿ ಅಕ್ರಮ ಬಾಂಗ್ಲಾ ಮುಸ್ಲಿಂ ಮುಸ್ಲಿಮರು 10 ಲಕ್ಕೂ ಹೆಚ್ಚಿದ್ದಾರೆ. ಅವರನ್ನು ದೇಶದಿಂದ ಹೊರಹಾಕಬೇಕು. ಒಂದು ವೇಳೆ ಕೇಂದ್ರ ಸರ್ಕಾರವು ಹಿಂದುಗಳ ರಣೆಗೆ ಹಿಂದೇಟು ಹಾಕಿದರೆ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರ ಮೂಲಕ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಮನವಿ ರವಾನಿಸಲಾಯಿತು. ವಿಠ್ಠಲ ಗಡ್ಡಿ, ರವಿಕುಮಾರ ಕೋಕೀತ್ಕರ, ವಿನಯ ಅಂಗ್ರೂಳ್ಳಿ ಸೇರಿ ಶ್ರೀರಾಮಸೇನೆಯ ನೂರಾರು ಕಾರ್ಯಕರ್ತರು ಇದ್ದರು.