ಬಾಕಿ ವೇತನ ಬಿಡುಗಡೆಗೊಳಿಸಿ

KARMIKA
Published on

ಯಾದಗಿರಿ : ಹೊರಗುತ್ತಿಗೆ ಅಧಾರದ ಮೇಲೆ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ವಸತಿ ನಿಲಯಗಳಲ್ಲಿ ಸೇವೆ ಸಲ್ಲಿಸುತ್ತಿರುವ ಕಾರ್ಮಿಕರಿಗೆ ಬಾಕಿ ವೇತನ ಬಿಡುಗಡೆಗೊಳಿಸಲು ಆಗ್ರಹಿಸಿ ಗುರುವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯಗಳ ಕಾರ್ಮಿಕರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.

ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಯಾದಗಿರಿ ಮತ್ತು ಸುರಪುರ ತಾಲೂಕಿನ ಹೊರಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿರುವ ಮೆಟ್ರಿಕ್ ಪೂರ್ವ ವಸತಿನಿಲಯ ಕಾರ್ಮಿಕರು ಫೆಬ್ರುವರಿ, ಮಾರ್ಚ ಸೇರಿ 4 ತಿಂಗಳ ಬಾಕಿ ವೇತನ ಬಿಡುಗಡೆಗೊಳಿಸಿಲ್ಲ. ಇದರಿಂದ ಕಾರ್ಮಿಕರು ಜೀವನ ನಡೆಸುವುದು ಕಷ್ಟಕರವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಯಾದಗಿರಿ ಮತ್ತು ಗುರುಮಠಕಲ್ ತಾಲೂಕಿನಲ್ಲಿ ಸೇವೆ ಸಲ್ಲಿಸುತ್ತಿರುವ ಹೊರಗುತ್ತಿಗೆ ಕಾರ್ಮಿಕರ ವೇತನವು ಸರಿಯಾಗಿ ಜಮೆಯಾಗುತ್ತಿಲ್ಲ. ಸುರಪುರ ತಾಲೂಕಿನಲ್ಲಿ ಸಹ ಜನವರಿ ತಿಂಗಳಿಂದ ಜೂನವರೆಗೆ 6 ತಿಂಗಳ ವೇತನ ಬಾಕಿ ಉಳಿಸಿಕೊಳ್ಳಲಾಗಿದೆ. ಈ ಕುರಿತು ಹಲವು ಬಾರಿ ಸಂಘದಿಂದ ಅಧಿಕಾರಿಗಳಿಗೆ ವಿಚಾರಿಸಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net