ಬಾಕಿ ವೇತನಕ್ಕೆ ಒತ್ತಾಯಿಸಿ ಪ್ರತಿಭಟನೆ

19 yerriswamy 05 protest photo
Published on

ಬಳ್ಳಾರಿ ; ಬಾಕಿ ವೇತನ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ಇಲ್ಲಿನ ಜಿಪಂ ಕಚೇರಿ ಆವರಣದಲ್ಲಿ ಎಐಯುಟಿಯುಸಿ ಸಂಘಟನೆಯು ಗುರುವಾರ ಪ್ರತಿಭಟನೆ ನಡೆಸಿದರು.
ಎಐಯುಟಿಯುಸಿ ಕಾರ್ಯದರ್ಶಿ ಡಾ.ಪ್ರಮೋದ್ ಮಾತನಾಡಿ, ರಾಜ್ಯದಲ್ಲಿ 47,250 ಅಡುಗೆಯವರು, 71,336 ಸಹಾಯಕರು ಸೇರಿ ಒಟ್ಟು 1,18,586 ಜನ ಕಾರ್ಮಿಕರು ಅಕ್ಷರ ದಾಸೋಹ ಯೋಜನೆಯಡಿ ಕೆಲಸ ನಿರ್ವಹಿಸುತ್ತಿದ್ದಾರೆ. ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಕೆಲಸಕ್ಕೆ ತಕ್ಕ ವೇತನ ನೀಡುತ್ತಿಲ್ಲ ಎಂದು ಆರೋಪಿಸಿದರು.
ಮಾಸಿಕ ವೇತನವನ್ನು ತಿಂಗಳಿನ ಆರಂದಲ್ಲೇ ಕಾರ್ಮಿಕರ ಖಾತೆಗೆ ಜಮಾ ಮಾಡಬೇಕು. ಕಾರ್ಮಿಕರಿಗೆ 3 ಗಂಟೆಯ ಕೆಲಸದ ಬದಲು 7 ಗಂಟೆಗೂ ಅಕ ಕೆಲಸ ನೀಡುತ್ತಿರುವುದು ಸರಿಯಲ್ಲ. ಹಲವು ವರ್ಷ ಸೇವೆ ಸಲ್ಲಿಸಿದ ಕಾರ್ಮಿಕರಿಗೆ ಕನಿಷ್ಠ ವೇತನ ಜಾರಿಗೊಳಿಸಬೇಕು. ಕಾರ್ಮಿಕರ ಸಮಸ್ಯೆಗೆ ಸರಿಯಾಗಿ ಸ್ಪಂದಿಸದೆ ಇದ್ದರೆ, ಮುಂದಿನ ದಿನಗಳಲ್ಲಿ ಡಿಸಿ ಕಚೇರಿ ಮುಂದೆ ಧರಣಿ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ದೇಶದಾದ್ಯಂತ ಬಿಸಿಯೂಟ ಯೋಜನೆ ಜಾರಿಯಲ್ಲಿದ್ದು, ಬಿಸಿಯೂಟ ನೌಕರರನ್ನು ಖಾಯಂ ಸರ್ಕಾರಿ ನೌಕರರನ್ನಾಗಿ ನೇಮಿಸಿಕೊಳ್ಳಬೇಕು. ಕಾರ್ಮಿಕರೆಂದು ಪರಿಗಣಿಸಿ ಕನಿಷ್ಠ ವೇತನ, ಆರೋಗ್ಯ ರಕ್ಷಣೆ, ಇಪಿಎಫ್, ಇಎಸ್‌ಐ, ನಿವೃತ್ತಿಯ ಪಿಂಚಣಿ, ಹೆರಿಗೆ ರಜೆ, ಸಮವಸ್ತ್ರ, ಗುರುತಿನ ಚೀಟಿ ಇತ್ಯಾದಿ ಸೌಲಭ್ಯಗಳನ್ನು ನೀಡಬೇಕು ಎಂದು ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net