ಬಾಗಲಕೋಟೆ ಜಿಲ್ಲಾದ್ಯಂತ ೯೦ ದಿನಗಳ ಮಧ್ಯಸ್ಥಿಕೆ ಅಭಿಯಾನ

bkt-14-12
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಽÃಶರಾದ ಎನ್.ವಿ.ವಿಜಯ್ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಽಕಾರದ ಸದಸ್ಯ ಕಾರ್ಯದರ್ಶಿ ಚಂದ್ರಶೇಖರ ದಿಡ್ಡಿ ಅವರು.
Published on

ಬಾಗಲಕೋಟೆ: ಜಿಲ್ಲಾ ಹಾಗೂ ಅಽನ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಲು ಜಿಲ್ಲಾದ್ಯಂತ ೯೦ ದಿನಗಳ ವಿಶೇಷ ಮಧ್ಯಸ್ಥಿಕೆ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ಜನತೆ ಇದರ ಸದುಪಯೋಗ ಪಡೆದುಕೊಳ್ಳುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಽÃಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಽಕಾರದ ಅಧ್ಯಕ್ಷರಾದ ಎನ್.ವಿ.ವಿಜಯ್ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವ ನ್ಯಾಯಾಽÃಶರು, ಈ ಅಭಿಯಾನ ಜುಲೈ ೧ ರಿಂದ ಆರಂಭಗೊAಡಿದ್ದು, ಇದು ೯೦ ದಿನಗಳ ವರೆಗೆ ರಾಜ್ಯಾದ್ಯಂತ ನಡೆಯುತ್ತಿದೆ. ಈ ಅಭಿಯಾನದಲ್ಲಿ ಬಾಕಿ ಇರುವ ಪ್ರಕರಣಗಳಾದ ವೈವಾಹಿಕ ಹಾಗೂ ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳು, ಮೋಟಾರು ಅಪಘಾತ, ಚೆಕ್ ಅಮಾನ್ಯ ಪ್ರಕರಣಗಳು, ವಾಣಿಜ್ಯ, ಸೇವಾ ಪ್ರಕರಣಗಳು, ರಾಜೀಯಾಗಬಲ್ಲ ಅಪರಾಽಕ ಪ್ರಕರಣಗಳು, ಗ್ರಾಹಕರ ವ್ಯಾಜ್ಯ ಪ್ರಕರಣಗಳು ಡಿ.ಆರ್.ಟಿ, ಪಾಲುದಾರಿಕೆ, ಭೂಸ್ವಾಽÃನ ಪ್ರಕರಣಗಳು ಹಾಗೂ ಇತರೆ ಸಿವಿಲ್ ಪ್ರಕರಣಗಳನ್ನು ಮಧ್ಯಸ್ಥಿಕೆಯ ಮೂಲಕ ಇತ್ಯರ್ಥಪಡಿಸಲಾಗುತ್ತದೆ.

ನ್ಯಾಯಾಲಯದ ಪ್ರಕರಣಗಳನ್ನು ಮಧ್ಯಸ್ಥಿಕೆ ಕೇಂದ್ರಕ್ಕೆ ಸೂಚಿಸಿಕೊಂಡಲ್ಲಿ ಅಂತಹ ಪ್ರಕರಣಗಳಲ್ಲಿ ಉಭಯ ಪಕ್ಷಗಾರರನ್ನು ಕರೆದುಕೊಂಡು ಜಿಲ್ಲಾ ನ್ಯಾಯಾಲಯದ ಸಮುಚ್ಛಯದಲ್ಲಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಽಕಾರಗಳ ಹಾಗೂ ತಾಲೂಕು ನ್ಯಾಯಾಲಯಗಳ ಆವರಣಗಳಲ್ಲಿರುವ ಮಧ್ಯಸ್ಥಿಕೆ ಕೇಂದ್ರಗಳಲ್ಲಿ ರಾಜೀ ಸಂಧಾನ ಮೂಲಕ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಬಹುದಾಗಿದೆ. ಸಾರ್ವಜನಿಕರು ತಮ್ಮ ಪ್ರಕರಣಗಳು ಉಚ್ಛ ನ್ಯಾಯಾಲಯದಲ್ಲಿ ಬಾಕಿ ಇದ್ದಲ್ಲಿ ಬೆಂಗಳೂರು, ಧಾರವಾಡ ಮತ್ತು ಕಲಬುರಗಿ ಉಚ್ಛ ನ್ಯಾಯಾಲಯಗಳ ಆವರಣಗಳಲ್ಲಿರುವ ಮಧ್ಯಸ್ಥಿಕೆ ಕೇಂದ್ರಗಳನ್ನು ಸಂಪರ್ಕಿಸಿ ಮಾಹಿತಿಯನ್ನು ಪಡೆದುಕೊಳ್ಳಬಹುದು ಎಂದು ತಿಳಿಸಿದ್ದಾರೆ.

ಜಿಲ್ಲಾದ್ಯಂತ ಎಲ್ಲ ಅಽÃನ ಮತ್ತು ಜಿಲ್ಲಾ ನ್ಯಾಯಾಲಯಗಳಲ್ಲಿ ಸೆಪ್ಟೆಂಬರ ೧೩ ರಂದು ರಾಷ್ಟಿçÃಯ ಲೋಕ ಅದಾಲತ್ ಆಯೋಜಿಸಲಾಗಿದೆ. ಈ ಅದಾಲತ್‌ನಲ್ಲಿ ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಅವಕಾಶವಿದ್ದು, ಸಾರ್ವಜನಿಕರು ಇದರ ಲಾಭ ಪಡೆದುಕೊಳ್ಳಬಹುದಾಗಿದೆ.

ರಾಜೀಯಾಗಬಲ್ಲ ಕ್ರಿಮಿನಲ್ ಪ್ರಕರಣಗಳು, ಎನ್‌ಐ ಆಕ್ಟ ಪ್ರಕರಣಗಳು, ಸಾಲ ವಸೂಲಾತಿ ಪ್ರಕರಣಗಳು, ಬ್ಯಾಂಕ್ ಸಾಲ ವಸೂಲಾತಿ, ಮೋಟಾರು ವಾಹನ ಅಪಘಾತ ಪ್ರಕರಣ, ಕಾರ್ಮಿಕ ವಿವಾದ ಪ್ರಕರಣಗಳು, ಗಣಿ ಮತ್ತು ಭೂ ವಿಜ್ಞಾನ ಪ್ರಕರಣಗಳು, ವೈವಾಹಿಕ ಪ್ರಕರಣಗಳು, ಭೂ ಸ್ವಾಽÃನ ಪ್ರಕರಣಗಳು, ಆಸ್ತಿ ವಿಭಾಗ ಪ್ರಕರಣಗಳು, ನಿಽðಷ್ಟ, ಜಾರಿ, ಹಕ್ಕು ಘೋಷಣೆ ಪ್ರಕರಣಗಳು, ಶಾಸ್ವತ ನಿರ್ಬಂಧಕಾಜ್ಞೆ ಹಾಗೂ ಇತರೆ, ಜನನ ಪ್ರಮಾಣ ಪತ್ರಕ್ಕೆ ಸಂಬAಽಸಿದ ಪ್ರಕರಣಗಳು, ಲಘು ವ್ಯಾಜ್ಯ, ಜೀವನಾಂಶ, ಕೌಟುಂಬಿಕ ದೌರ್ಜನ್ಯದಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆಗೆ ಸಂಬAಽಸಿದ ಪ್ರಕರಣಗಳು ಮತ್ತು ವಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಲೋಕ ಅದಾಲತ್‌ನಲ್ಲಿ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಽÃಶ ಎನ್.ವಿ.ವಿಜಯ್, ಜಿಲ್ಲಾ ಕಾನೂನು ಸೇವೆಗಳ ಪ್ರಾಽಕಾರದ ಸದಸ್ಯ ಕಾರ್ಯದರ್ಶಿ ಚಂದ್ರಶೇಖರ ದಿಡ್ಡಿ ಜಂಟಿಯಾಗಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net