ಬಾಗಲಕೋಟೆಯಲ್ಲಿ ಬಂದ್ ಗೆ ವ್ಯಕ್ತವಾಗದ ಬೆಂಬಲ

bkt-22-13-a
ಕರ್ನಾಟಕ ಬಂದ್ ಗೆ ಬಾಗಲಕೋಟೆಯಲ್ಲಿ ಬೆಂಬಲ ವ್ಯಕ್ತವಾಗಲಿಲ್ಲವಾದರೂ ಕರವೇ ಶಿವರಾಮೇಗೌಡ ಬಣದ ಕಾರ್ಯಕರ್ತರು ಬೆಂಬಲ ವ್ಯಕ್ತಪಡಿಸಿ, ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಎಂಇಎಸ್ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
Published on

ಬಾಗಲಕೋಟೆ: ಕನ್ನಡ ಪರ ಸಂಘಟನೆಗಳು ಶನಿವಾರ ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ಬಾಗಲಕೋಟೆ ಜಿಲ್ಲೆಯಲ್ಲಿ ಬೆಂಬಲ ವ್ಯಕ್ತವಾಗದೇ ಬಂದ್ ಗೆ ಅತ್ಯಂತ ನೀರಸ ಪ್ರತಿಕ್ರಿಯೆ ಕಂಡು ಬಂದಿತು.

ಜಿಲ್ಲೆಯಲ್ಲಿ ಎಂದಿನ0ತೆ ಶನಿವಾರವೂ ಸಹ ಸಾರಿಗೆ ಬಸ್, ಖಾಸಗಿ ವಾಹನಗಳು, ಆಟೋ, ಲಾರಿಗಳೆಲ್ಲ ಸಂಚಾರ ಸಹಜ ಸ್ಥಿತಿಯಲ್ಲಿ ಇತ್ತು. ಅಂಗಡಿ ಮುಂಗಟ್ಟುಗಳು ಬೆಳಗ್ಗಯಿಂದಲೇ ತೆರೆದು ವಹಿವಾಟು ನಡೆಸಿದವು. ಶಾಲೆ, ಕಾಲೇಜುಗಳಿಗೆ ವಿದ್ಯಾರ್ಥಿಗಳು ಹಾಜರಾಗಿದ್ದವು.

ನಗರದಲ್ಲಿ ಕನ್ನಡ ಪರ ಸಂಘಟನೆಗಳು, ಹೋಟೆಲ್ ಮಾಲೀಕರು, ಆಟೋ, ಖಾಸಗಿ ವಾಹನ ಸಂಘಗಳು ಬಂದ್‌ಗೆ ಬೆಂಬಲ ನೀಡದೇ ಇರುವುದರಿಂದ ಜಿಲ್ಲೆಯಲ್ಲಿ ಬಂದ್ ಎ-ೆಕ್ಟ್ ತಟ್ಟಲಿಲ್ಲ.

ನಗರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ) ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದ್ದರಿಂದ ಇಲ್ಲಿನ ಬಸವೇಶ್ವರ ವೃತ್ತದಲ್ಲಿ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಎಂಇಎಸ್ ಪುಂಡರ ವಿರುದ್ಧ ದಿಕ್ಕಾರ ಕೂಗಿದರು. ರಾಜ್ಯದಲ್ಲಿ ಎಂಇಎಸ್ ಬ್ಯಾನ್ ಮಾಡುವಂತೆ ಸರ್ಕಾರಕ್ಕೆ ಆಗ್ರಹಿಸಿ, ಎಂಇಎಸ್ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಶಿವರಾಮೇಗೌಡ ಬಣದ ಕಾರ್ಯಕರ್ತರನ್ನು ಹೊರತುಪಡಿಸಿ ಉಳಿದಂತೆ ಬಂದ್ ಹಿನ್ನಲೆಯಲ್ಲಿ ಪ್ರತಿಭಟನೆಗಳು ಕಂಡು ಬರಲಿಲ್ಲ. ಹೀಗಾಗಿ ಸಾರ್ವಜನಿಕರ ಜನಜೀನವಕ್ಕೆ ಬಂದ್‌ನಿ0ದ ಯಾವುದೇ ತೊಂದರೆ ಆಗಲಿಲ್ಲ. ಎಂದಿನ0ತೆ ಜನಜೀವನ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net