ಬಾಣಾವರ ಪ್ರೌಢಶಾಲೆಯಲ್ಲಿ ಸ್ವಾತಂತ್ರೃ ದಿನಾಚರಣೆಗೆ ಸಿದ್ಧತೆ

IMG-20250811-WA0132
Published on

ಅರಸೀಕೆರೆ ಗ್ರಾಮಾಂತರ: ತಾಲೂಕಿನ ಬಾಣಾವರ ಪಟ್ಟಣದ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವೀಣಾ ವಿಶ್ವನಾಥ್ ಅಧ್ಯಕ್ಷತೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸೋಮವಾರ ಪೂರ್ವಭಾವಿ ಸಭೆ ಆಯೋಜಿಸಲಾಗಿತ್ತು.

ಅಧ್ಯಕ್ಷೆ ವೀಣಾ ವಿಶ್ವನಾಥ್ ಮಾತನಾಡಿ, ಪಟ್ಟಣದಲ್ಲಿರುವ ಖಾಸಗಿ ಹಾಗೂ ಸರ್ಕಾರಿ ಶಾಲೆಗಳು ಎಲ್ಲ ಶಾಲೆಗಳಿಂದಲೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ನೀಡಬೇಕು. ಮಕ್ಕಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಪ್ರತಿ ವರ್ಷದಂತೆ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಈ ಬಾರಿಯೂ ಸ್ವಾತಂತ್ರ್ಯ ದಿನ ಆಚರಿಸಲಾಗುವುದು. ಆದ್ದರಿಂದ ಆವರಣವನ್ನು ಸ್ವಚ್ಛಗೊಳಿಸಬೇಕು. ಅಗತ್ಯ ಸೌಕರ್ಯಗಳನ್ನು ಒದಗಿಸಬೇಕು. ಎಲ್ಲರೂ ಅರ್ಥಪೂರ್ಣವಾಗಿ ಆಚರಿಸಲು ಸಹಕಾರ ನೀಡಬೇಕು ಎಂದರು.

ಉಪಾಧ್ಯಕ್ಷೆ ಶಾರದಮ್ಮ, ಎಲ್ಲ ಶಾಲೆಗಳ ಮುಖ್ಯ ಶಿಕ್ಷಕರು, ಪಿಡಿಒ ಕುಮಾರಸ್ವಾಮಿ, ಕಾರ್ಯದರ್ಶಿ ಶ್ರೀನಾಥ್, ಸಿಬ್ಬಂದಿ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net