ಬಾರಿ ಮಳೆ ಹಿನ್ನಲೆಯಲ್ಲಿ ನಾಳೆ ಶಾಲೆ, ಕಾಲೇಜಿಗೆ ರಜೆ

ಬಾರಿ ಮಳೆ ಹಿನ್ನಲೆಯಲ್ಲಿ ನಾಳೆ ಶಾಲೆ, ಕಾಲೇಜಿಗೆ ರಜೆ
Published on

ಹಾಸನ: ಜಿಲ್ಲೆಯಲ್ಲಿ ಕಳದ ಎರಡು ದಿನದಿಂದ ಮಳೆಯ ಆರ್ಭಟ ಹೆಚ್ಚಗಿರುವ ಮುಂಜಾಗ್ರತ ಕ್ರಮವಾಗಿ ಜಿಲ್ಲೆಯ 5ತಾಲೂಕಿನ ಶಾಲೆಗಳಿಗೆ ಶಾಲೆ ಮತ್ತು 4ತಾಲೂಕಿನ ಕಾಲೇಜುಗಳಿಗೆ ರಜೆ ನೀಡಿ ಆದೇಶ ಹೊರಡಿಸಲಾಗಿದೆ.
ಜಿಲ್ಲೆಯಲ್ಲಿ ಬಾರಿ ಮಳೆ ಆಗುತ್ತಿದ್ದು, ಮುಂದಿನ ಎರಡು ದಿನ (ಜು.17ರ )ವರಗೂ ಆರೆಂಟ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕೆಲ ಭಾಗದಲ್ಲಿ 115.6 ಮಿ.ಮೀ.ನಿಂದ 204.4 ಮಿ.ಮೀ. ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಈ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಮಂಗಳವಾರ ಸಕಲೇಶಪುರ, ಆಲೂರು, ಬೇಲೂರು ಹಾಗು ಹಾಸನ ಅರಕಲಗೂಡು ತಾಲೂಕುಗಳ ಶಾಲೆಗಳಿಗೆ ರಜೆ ನೀಡಲಾಗಿದೆ. ಜು.16 ರಂದು ಚನ್ನರಾಯಪಟ್ಟಣ, ಅರಸೀಕೆರೆ, ಹೊಳೆನರಸೀಪುರ, ತಾಲೂಕುಗಳ ಶಾಲೆಗಳಿಗೆ ರಜೆ ನೀಡಿಲ್ಲ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಚ್.ಕೆ.ಪಾಂಡು ಅವರು ಆದೇಶ ಹೊರಡಡಿಸಿದ್ದಾರೆ.
ಅದೇ ರೀತಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನಿರ್ದೇಶಕ ಮಹಾಲಿಂಗಯ್ಯ ಅವರು ಕೂಡ ಜಿಲ್ಲೆಯ ಸಕಲೇಶಪುರ, ಆಲೂರು ಬೇಲೂರು, ಅರಕಲಗೂಡು ತಾಲೂಕುಗಳ ಪದವಿ ಪೂರ್ವ ಕಾಲೇಜುಗಳಿಗೆ ಜು.16 ರಂದು ಅಧಿಕ ಮಳೆಯ ಕಾರಣ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಉಳಿದ ತಾಲೂಕಿನವರು ಈಗಾಗಲೇ ಉಲ್ಲೇಖಿಸಿರುವ ಸುತ್ತೋಲೆ ಅನ್ವಯ ಮಳೆಯ ತೀವ್ರತೆ ಆಧಾರದ ಮೇಲೆ ಪ್ರಾಂಶುಪಾಲರೇ ರಜೆ ನೀಡಲು ಸೂಚಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net