ಬಾಲ ಕಾರ್ಮಿಕರ ರಕ್ಷಣೆ ಪ್ರತಿಜ್ಞಾವಿಧಿ ಸ್ವೀಕಾರ

CTD NEWS -DHO--
Published on

ಚಿತ್ರದುರ್ಗ: ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನದ ಪ್ರಯುಕ್ತ ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ಅಭಿನವ್ ಅಧ್ಯಕ್ಷತೆಯಲ್ಲಿ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

ನಗರದ ಡಿಎಚ್‌ಒ ಕಚೇರಿಯಲ್ಲಿ ಗುರುವಾರ ವಿಶ್ವ ಬಾಲಕಾರ್ಮಿಕ ವಿರೋಧಿ ದಿನ-2025ರ ಪ್ರಯುಕ್ತ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

ನಾನು ವಾಸಿಸುವ ಸುತ್ತಮುತ್ತಲಿನ ಪ್ರದೇಶ ಹಾಗೂ ಕೆಲಸ ಮಾಡುವ ಸ್ಥಳದಲ್ಲಿ ಯಾವುದೇ ಬಾಲಕಾರ್ಮಿಕರು ಕಂಡುಬಂದರೆ ನೇಮಿಸಿಕೊಂಡ ಮಾಲೀಕರು ಹಾಗೂ ಪಾಲಕರಿಗೆ ತಿಳಿವಳಿಕೆ ಹೇಳಿ ಮಗುವನ್ನು ಶಾಲೆಗೆ ಸೇರಿಸುತ್ತೇನೆ. ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರನ್ನು ತೊಡಗಿಸಿಕೊಂಡು ತಯಾರಿಸಿದ ಯಾವುದೇ ವಸ್ತುವನ್ನು ಉಪಯೋಗಿಸುವುದಿಲ್ಲ. ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರ ಸೇವೆ ಪಡೆಯುವುದಿಲ್ಲವೆಂದು ವಿಶ್ವ ಬಾಲಕಾರ್ಮಿಕ ವಿರೋಧಿ ದಿನದಂದು ಪ್ರಮಾಣ ಮಾಡುವುದಾಗಿ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ. ಮೂಗಪ್ಪ ಪ್ರತಿಜ್ಞಾವಿಧಿ ಬೋಧಿಸಿದರು.

ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ಎನ್. ಕಾಶಿ, ಟಿಎಚ್‌ಒ ಡಾ.ಬಿ.ವಿ. ಗಿರೀಶ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣನಾಯಕ್, ಕಚೇರಿ ಅಧೀಕ್ಷಕ ಸೈಯದ್ ಇಸ್ಮಾಯಿಲ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಜಾನಕಿ, ಜಿಲ್ಲಾ ಆರೋಗ್ಯ ಮೇಲ್ವಿಚಾರಕ ಸುರೇಶ್‌ಬಾಬು, ವೈದ್ಯಾಧಿಕಾರಿಗಳು, ಆರೋಗ್ಯ ನಿರೀಕ್ಷಣಾಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net