ಬಾಲಕ ಸಾವು : ಡೆಂಗ್ಯೂ ಶಂಕೆ

ಬಾಲಕ ಸಾವು : ಡೆಂಗ್ಯೂ ಶಂಕೆ
Published on

ಅರಸೀಕೆರೆ: ಶಂಕಿತ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಬಾಲಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವ ಘಟನೆ ನಗರದ ಹಿಮ್ಸ್ ಆಸ್ಪತ್ರೆಯಲ್ಲಿ ಸೋಮವಾರ ನಡೆದಿದೆ. ಅರಸೀಕೆರೆ ತಾಲೂಕಿನ ಮಾಡಾಳು ಗ್ರಾಮದ ಗೌರಮ್ಮ-ನಾಗರಾಜ ದಂಪತಿ ಪುತ್ರ ರಾಜೇಶ್ (9) ಮೃತ.
ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 3ನೇ ತರಗತಿ ಓದುತ್ತಿದ್ದ ಬಾಲಕ ರಾಜೇಶ್, ಕಳೆದ ನಾಲ್ಕು ದಿನಗಳ ಹಿಂದೆ ತೀವ್ರ ಜ್ವರದಿಂದ ಬಳಲುತ್ತಿದ್ದ. ಹೀಗಾಗಿ ಅರಸೀಕೆರೆ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೂ ಚೇತರಿಸಿಕೊಳ್ಳದೆ ಇದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಭಾನುವಾರ ನಗರದ ಹಿಮ್ಸ್‌ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಬಾಲಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ. ಬಾಲಕ ಡೆಂಗ್ಯೂ ಜ್ವರದಿಂದಲೇ ಮೃತಪಟ್ಟಿದ್ದಾನೆ ಎಂದು ಆರೋಗ್ಯ ಇಲಾಖೆ ಇನ್ನೂ ಖಚಿತ ಪಡಿಸಿಲ್ಲ. ಆದರೆ, ಪೋಷಕರು ಡೆಂಗ್ಯೂನಿಂದಲೇ ಸಾವನ್ನಪ್ಪಿಸರಬಹುದು ಎಂದು ಶಂಕಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net