ಬಾಲಕಾರ್ಮಿಕರನ್ನು ರಕ್ಷಿಸಿ, ಪುನರ್ವಸತಿ ಕಲ್ಪಿಸಿ

07 YERRISWAMY 03
Published on

ಬಳ್ಳಾರಿ : ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ಕುರಿತು ಅರಿವು ಮೂಡಿಸಬೇಕು. ಬಾಲಕಾರ್ಮಿಕರನ್ನು ರಕ್ಷಿಸಿ, ಪುನರ್ವಸತಿ ಕಲ್ಪಿಸಬೇಕು ಎಂದು ಎಡಿಸಿ ಮೊಹಮ್ಮದ್ ಝುಬೇರ್ ಹೇಳಿದರು.
ನಗರದ ಎಡಿಸಿ ಕಚೇರಿಯ ಸಭಾಂಗಣದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಜೂ.12 ರಂದು ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಆಚರಿಸಲಾಗುತ್ತಿದ್ದು, ಶಾಲೆಗಳಲ್ಲಿ ಪ್ರಬಂಧ ಸ್ಪರ್ಧೆ ಆಯೋಜಿಸಿ ಹಾಗೂ ಮಕ್ಕಳಿಂದ ಜಾಗೃತಿ ಜಾಥಾ ಹಮ್ಮಿಕೊಳ್ಳಬೇಕು. ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಬೇಕು. ಇದಕ್ಕೆ ಬೇಕಾದ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು. ಶಾಲೆ ಬಿಟ್ಟ ಮಕ್ಕಳನ್ನು ಪುನಃ ಶಾಲೆಗೆ ಕರೆತರುವ ಕೆಲಸವಾಗಬೇಕು. ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಅನಿರೀಕ್ಷಿತ ದಾಳಿ ನಡೆಸಬೇಕು. ವಿವಿಧ ಕೆಲಸಗಳಲ್ಲಿ ತೊಡಗಿರುವ ಬಾಲಕಾರ್ಮಿಕರನ್ನು ಪತ್ತೆಹಚ್ಚಿ ಶೈಕ್ಷಣಿಕವಾಗಿ ಮುನ್ನಲೆಗೆ ತರಲು ಪೋಷಕರ ಮನಃ ಪರಿವರ್ತನೆಗೊಳಿಸುವ ಕಾರ್ಯವಾಗಬೇಕು ಎಂದರು.
ಸಭೆಯಲ್ಲಿ ಬಾಲಕಾರ್ಮಿಕ ಯೋಜನೆಯ ಯೋಜನಾಧಿಕಾರಿ ಮೌನೇಶ್, ಜಿಲ್ಲಾ ಕಾರ್ಮಿಕ ಅಧಿಕಾರಿ ಕಮಲ್ ಷಾ ಅಲ್ತಫ್ ಅಹಮದ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್ಕುಮಾರ, ಡಿಡಿಪಿಐ ಉಮಾದೇವಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net