ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ ೩೦ ವರ್ಷ ಶಿಕ್ಷೆ

court
Published on

ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ ೩೦ ವರ್ಷ ಶಿಕ್ಷೆ

ಚಿಕ್ಕೋಡಿ : ಜಿಲ್ಲೆಯ ಸಂಕೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ ೩೦ ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ತಲಾ ೧೦ ಸಾವಿರ ದಂಡ ವಿಧಿಸಿ ಜಿ¯್ಲÁ ಪೋಕ್ಸೋ ನ್ಯಾಯಾಲಯ ಸೋಮವಾರ ತೀರ್ಪು ಪ್ರಕಟಿಸಿದೆ.

ಹುಕ್ಕೇರಿ ತಾಲೂಕಿನ ಸೋಲ್ಲಾಪುರ ಗ್ರಾಮದ ನಿವಾಸಿ ಅಪ್ಪಾಸಾಹೇಬ ಬಾಳಗೌಡ (ತೋಡಕರ) ಪಾಟೀಲ(೪೨)ಶಿಕ್ಷೆಗೆ ಒಳಗಾದ ಅಪರಾಧಿ.

ಘಟನೆ ವಿವರ: ಶಿಕ್ಷೆಗೆ ಒಳಗಾದ ಅಪರಾಧಿಯು ೨೦೨೧ರಲ್ಲಿ  ಅಪ್ರಾಪ್ತ ಹಾಗೂ ಮಾನಸಿಕ ಅಸ್ವಸ್ಥಳಾಗಿದ್ದ ಬಾಲಕಿಯನ್ನು ಪುಸಲಾಯಿಸಿ ಒತ್ತಾಯ ಪೂರ್ವಕವಾಗಿ ಅತ್ಯಾಚಾರ ಎಸಗಿದ್ದನು. ಈ ಕುರಿತು ಪ್ರಕರಣ ದಾಖಲಿಸಿಕೊಂಡು ಸಂಕೇಶ್ವರ ಪೊಲೀಸ್ ಠಾಣೆ ತನಿಖಾಕಾಧಿಕಾರಿ ರಮೇಶ ಛಾಯಾಗೋಳ ಹೆಚ್ಚುವರಿ ಜಿ¯್ಲÁ ಮತ್ತು ಸತ್ರ ನ್ಯಾಯಾಲಯಕ್ಕೆ  ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.ಪ್ರಕರಣ ವಿಚಾರಣೆ ನಡೆಸಿದ ನ್ಯಾಯಾಧೀಶೆ ಸಿ.ಎಂ.ಪುಷ್ಪಲತಾ ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಈ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಲï.ವಿ.ಪಾಟೀಲ ವಾದ ಮಂಡಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net