ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ 20 ವರ್ಷ ಶಿಕ್ಷೆ ಪ್ರಕಟ

court
Published on

ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ 20 ವರ್ಷ ಶಿಕ್ಷೆ ಪ್ರಕಟ

ಬೆಳಗಾವಿ: ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದ ಜಿಲ್ಲೆಯ ಬೈಲಹೊಂಗಲ ಪಟ್ಟಣದ ನಂದೆಮ್ಮನಗರ ನಿವಾಸಿ ವಿಠ್ಠಲ ಸಿದ್ಲಿಂಗಪ್ಪ ಕಿತ್ತೂರ ( 30),ಅಪರಾಧಿಗೆ 20 ವರ್ಷ ಕಾರಾಗೃಹ ಶಿಕ್ಷೆ ಹಾಗೂ 10 ಸಾವಿರ ರೂ. ದಂಢ ವಿಧಿಸಿ ಜಿಲ್ಲಾ ಪೋಕ್ಸೋ ನ್ಯಾಯಾಲಯ ಶನಿವಾರ ತೀರ್ಪು ಪ್ರಕಟಿಸಿದೆ.

ಅಪ್ರಾಪ್ತೆಯನ್ನು 2019 ರಲ್ಲಿ ಅಪರಾಧಿ ಹಾಗೂ ಇನ್ನೋರ್ವ ಆರೋಪಿ ಸಂತೋಷ ಉಮೇಶ ಹುಲಮನಿ ಸೇರಿಕೊಂಡು ಬಾಲಕಿಯನ್ನು ಅಪಹರಣ ಮಾಡಿ,ಮಂಗಳೂರನಲ್ಲಿ ಮನೆ ಮಾಡಿ ಇರಿಸಿಕೊಂಡು ಅಪರಾಧಿ ವಿಠ್ಠಲ ಕಿತ್ತೂರ ಒತ್ತಾಯ ಪೂರ್ವಕವಾಗಿ ಲೈಂಗಿಕ ದೌರ್ಜನ್ಯವೆಸಗಿ,ಜೀವ ಬೆದರಿಕೆಯೊಡ್ಡಿದ ಕುರಿತು ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ದೂರು ದಾಖಲಿಸಿಕೊಂಡ ತನಿಖಾಧಿಕಾರಿ ಮಂಜುನಾಥ ಕುಸುಗಲ್ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಪ್ರಕರಣ ಕುರಿತು ವಿಚಾರಣೆ ನಡೆಸಿದ ನ್ಯಾಯಾಧೀಶೆ ಸಿ.ಎಂ.ಪುಷ್ಪಲತಾ ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.ನೊಂದ ಬಾಲಕಿಗೆ ಜಿಲ್ಲಾ ಕಾನೂನು ಪ್ರಾಧಿಕಾರದಿಂದ 4 ಲಕ್ಷ.ರೂ ಪರಿಹಾರ ನೀಡುವಂತೆ ಆದೇಶಿಸಲಾಗಿದೆ.ಪ್ರಕರಣದ ಎರಡನೇ ಆರೋಪಿ ಸಂತೋಷ ಉಮೇಶ ಹುಲಮನಿ ಮರಣ ಹೊಂದಿದ್ದಾನೆ.ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಲ್.ವಿ.ಪಾಟೀಲ ವಾದ ಮಂಡಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net