ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ ಶಿಕ್ಷೆ ಪ್ರಕಟ

court
Published on

ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ ಶಿಕ್ಷೆ ಪ್ರಕಟ

ಬೆಳಗಾವಿ: ಜಿಲ್ಲೆಯ ಸವದತ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತೆಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿದ್ದ ಅಪರಾಧಿಗೆ 30 ವರ್ಷ ಕಾರಾಗೃಹ ಶಿಕ್ಷೆ ಹಾಗೂ 10 ಸಾವಿರ ರೂ. ದಂಢ ವಿಧಿಸಿ ಜಿಲ್ಲಾ ಪೋಕ್ಸೋ ನ್ಯಾಯಾಲಯ ಮಂಗಳವಾರ ತೀರ್ಪು ಪ್ರಕಟಿಸಿದೆ.

ಸವದತ್ತಿ ತಾಲೂಕಿನ ಅರ್ಟಗಲ್ ಗ್ರಾಮದ ನಿವಾಸಿ ಶಿವಪ್ಪ ಭೀಮಪ್ಪ ತ್ಯಾಪಿ ( 26)ಶಿಕ್ಷೆಗೊಳಗಾದ ಅಪರಾಧಿ.ಈತ

ಅಪ್ರಾಪ್ತೆಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿರುವ ಕುರಿತು ಸವದತ್ತಿ ಪೊಲೀಸ್ ಠಾಣೆಯಲ್ಲಿ 2020ರಲ್ಲಿ ದೂರು ದಾಖಲಾಗಿತ್ತು.

ದೂರು ದಾಖಲಿಸಿಕೊಂಡ ತನಿಖಾಧಿಕಾರಿ ಮಂಜುನಾಥ ನಡುವಿನಮನಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಪ್ರಕರಣ ಕುರಿತು ವಿಚಾರಣೆ ನಡೆಸಿದ ನ್ಯಾಯಾಧೀಶೆ ಸಿ.ಎಂ.ಪುಷ್ಪಲತಾ ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.ನೊಂದ ಬಾಲಕಿಗೆ ಜಿಲ್ಲಾ ಕಾನೂನು ಪ್ರಾಧಿಕಾರದಿಂದ 4 ಲಕ್ಷ.ರೂ ಪರಿಹಾರ ನೀಡುವಂತೆ ಆದೇಶಿಸಲಾಗಿದೆ.

ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಲ್.ವಿ.ಪಾಟೀಲ ವಾದ ಮಂಡಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net