

ಮೈಸೂರು: ಮಳವಳ್ಳಿಯಲ್ಲಿ ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದಿರುವ ಘಟನೆ ಖಂಡಿಸಿ ಶ್ರೀ ಗಂಧದಗುಡಿ ಫೌಂಡೇಷನ್ ವತಿಯಿಂದ ಗಾಂಧಿ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ಗಾಂಧಿ ವೃತ್ತದಲ್ಲಿ ಸೇರಿದ ವಿದ್ಯಾರ್ಥಿಗಳು, ಸಂಘಟನೆ ಮುಖಂಡರು ಘಟನೆಯನ್ನು ಖಂಡಿಸಿ ಆರೋಪಿಯನ್ನು ಗಲ್ಲಿಗೇರಿಸಬೇಕು ಎಂದು ಆಗ್ರಹಿಸಿ ಘೋಷಣೆ ಕೂಗಿದರು. ಮನೆಪಾಠ ಹೇಳಿಕೊಡುವ ನೆಪದಲ್ಲಿ ಮನೆಗೆ ಕರೆಸಿಕೊಂಡು ಬಾಲಕಿಯ ಮೇಲೆ ಅತ್ಯಾಚಾರ ನಡೆಸಿರುವುದು ಇಡೀ ಮಾನವ ಸಮಾಜವೇ ತಲೆತಗ್ಗಿಸುವಂತೆ ಮಾಡಿದೆ. ಶಿಕ್ಷಕ ಎಂಬ ಪದಕ್ಕೆ ಆತ ಮಸಿ ಬಳಿದಿದ್ದಾನೆ. ಇಂತಹವರ ವಿರುದ್ಧ ಸರ್ಕಾರ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ಫೌಂಡೇಷನ್ ರಾಜ್ಯಾಧ್ಯಕ್ಷ ಆರ್ಯನ್, ಉಪಾಧ್ಯಕ್ಷ ಮನೋಹರಗೌಡ, ಸಂಘಟನಾ ಕಾರ್ಯದರ್ಶಿ ಮಹದೇವ ಶೆಟ್ಟಿ, ಪದಾಧಿಕಾರಿಗಳಾದ ಮೇಘನ್, ಆದರ್ಶ್, ರಥನ್, ನಿತಿನ್, ಚೇತನ್, ಹೇಮಂತ್ ರಾವ್, ಮನುಗೋಪಾಲ್ ಇತರರು ಇದ್ದರು.