ಬಾಲಕಿ ಹತ್ಯೆಗೆ ಸಂಶೋಧಕರ ಶ್ರದ್ದಾಂಜಲಿ

15
Published on

ಮೈಸೂರು: ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ನಡೆದ 10 ವರ್ಷದ ಬಾಲಕಿ ಅತ್ಯಾಚಾರ ಹಾಗೂ ಬರ್ಬರ ಕೊಲೆ ಘಟನೆ ಖಂಡಿಸಿದ ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘದಿಂದ ಶುಕ್ರವಾರ ಶ್ರದ್ದಾಂಜಲಿ ಸಲ್ಲಿಸಲಾಯಿತು.
ಮಾನಸಗಂಗೋತ್ರಿಯ ದೊಡ್ಡ ಗಡಿಯಾರ ಬಳಿ ಸಭೆ ನಡೆಸಿದ ಸಂಶೋಧನಾ ವಿದ್ಯಾರ್ಥಿಗಳು, ಇದು ನಾಗರೀಕ ಸಮಾಜ ತಲೆ ತಗ್ಗಿಸುವಂತಹ ಹೇಯ ಘಟನೆ. ತಪ್ಪು ಮಾಡಿದ ಅಪರಾಧಿಗೆ ಕ್ಷಮೆ ನೀಡದೆ ಕಠಿಣ ಶಿಕ್ಷೆ ಆಗಲೇಬೇಕು, ಭವಿಷ್ಯದಲ್ಲಿ ಇಂಥ ನೀಚ ಘಟನೆಗಳು ಮರುಕಳಿಸದಂತೆ ಪೊಲೀಸರು ಕಟ್ಟೆಚ್ಚರ ವಹಿಸಬೇಕು ಎಂದು ಆಗ್ರಹಿಸಿದರು.
ಹೆತ್ತ ಮಗುವನ್ನು ಕಳೆದುಕೊಂಡು ಶೋಕದಲ್ಲಿರುವ ಬಾಲಕಿಯ ಪೋಷಕರ ದುಃಖದಲ್ಲಿ ಸಂಶೋಧಕರೆಲ್ಲ ಭಾಗಿ. ನೂರುಕಾಲ ಬಾಳಿ ಬದುಕಬೇಕಿದ್ದ ಮಗುವಿನ ದುರ್ಮರಣ ನಮಗೆಲ್ಲರಿಗೂ ಅತೀವ ನೋವುಂಟು ಮಾಡಿದೆ. ಆ ಬಾಲಕಿಯ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ದುಃಖವನ್ನು ಭರಿಸುವ ಶಕ್ತಿ ಎಲ್ಲರಿಗೂ ನೀಡಲಿ ಎಂದು ಪ್ರಾರ್ಥಿಸಲಾಯಿತು.
ಸಂಘದ ಗೌರವಾಧ್ಯಕ್ಷ ಮಹೇಶ್ ಸೋಸ್ಲೆ, ಅಧ್ಯಕ್ಷ ನಟರಾಜ್ ಶಿವಣ್ಣ, ಉಪಾಧ್ಯಕ್ಷ ರಾಜೇಶ್, ಸಂಶೋಧನಾ ವಿದ್ಯಾರ್ಥಿಗಳಾದ ಪಾರ್ಥ, ರಾಘವೇಂದ್ರ, ನಂಜುಂಡಸ್ವಾಮಿ, ಪ್ರವೀಣ್, ರಂಗನಾಥ್, ನಾಗಮಲ್ಲು, ಮುತ್ತುರಾಜ್, ವೆಂಕಟೇಶ್ ಇತತರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net