

ಕಲಬುರಗಿ: ಬಾಲಕಿಯರು ಮಾಸಿಕ ಋತು ಚಕ್ರದ ವೇಳೆ ನೈರ್ಮಲ್ಯದ ಬಗ್ಗೆ ಜಾಗೃತಿ ವಹಿಸಬೇಕು. ಸ್ವಚ್ಛತೆ ಕಾಪಾಡಿಕೊಳ್ಳುವುದು ಅಗತ್ಯವಾಗಿದೆ. ಅದರ ಜತೆಗೆ ಋತು ಚಕ್ರದ ಬಗ್ಗೆ ಸುಳ್ಳು ಮತ್ತು ತಪ್ಪು ಕಲ್ಪನೆಗಳಿಂದ ದೂರ ಇರಬೇಕು ಎಂದು ಸ್ತ್ರೀರೋಗ ತಜ್ಞೆ ಡಾ.ಸೌಮ್ಯಾ ಪಾಟೀಲ್ ಸಲಹೆ ನೀಡಿದರು.
ನಗರದ ಕಪನೂರ ಪ್ರದೇಶದಲ್ಲಿರುವ ಅಮಿತ್ ಪಾಟೀಲ್ ಕೇಂದ್ರೀಯ ವಿದ್ಯಾಲಯದಲ್ಲಿ ಲೈಫ್ ಮ್ಯಾನ್‌ಕೈಂಡ್ ಫಾರ್ಮಾ ಕಂಪನಿಯಿಂದ ಗುರುವಾರ ಏರ್ಪಡಿಸಿದ್ದ ವಿಶೇಷ ಸಂವಾದ ಮತ್ತು ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿ, ಬಾಲಕಿಯರಿಗೆ ಕಿಶೋರಾವಸ್ಥೆಯಲ್ಲಿ ಆಗುವ ಬದಲಾವಣೆಗಳ ಬಗ್ಗೆ ಅರಿವು ಹೊಂದಬೇಕು. ಗುಣಮಟ್ಟದ ಆರೋಗ್ಯಕರ ಆಹಾರ ಸೇವನೆ ಮಾಡಬೇಕು. ಸಮಸ್ಯೆಯ ಅರಿವು ಇದ್ದರೆ ಪರಿಹಾರ ಶೀಘ್ರ ದೊರೆಯುತ್ತದೆ ಎಂದು ಹೇಳಿದರು.
ಬಾಲಕಿಯರಲ್ಲಿ ಯಾವುದೇ ಆರೋಗ್ಯ ಸಮಸ್ಯೆಗಳು ಕಂಡು ಬಂದರೆ, ವಿಶೇಷವಾಗಿ ಋತು ಚಕ್ರದ ಬಗ್ಗೆ ಅನುಮಾನಗಳು ಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ, ಸಲಹೆಗಳನ್ನು ಪಡೆಯಬೇಕು ಎಂದು ಹೇಳಿದರು.
ಪ್ರಾಂಶುಪಾಲ ಸುಷ್ಮಾ ಹಡಗಲಿಮಠ, ಫಾರ್ಮಾ ಕಂಪನಿಯ ಸಿಬ್ಬಂದಿ, ಶಾಲೆಯ ಶಿಕ್ಷಕರು, ಸಿಬ್ಬಂದಿ ಇದ್ದರು.