

ಕುಶಾಲನಗರ: ಕುಶಾಲನಗರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವತಿಯಿಂದ ಸೋಮವಾರ ಆರಂಭಗೊಂಡ 2022-23ನೇ ಸಾಲಿನ ವಿಟಿಯು ಅಂತರ ಕಾಲೇಜುಗಳ ವಲಯ ಮಟ್ಟದ ಬಾಲಕಿಯರ ಕಬಡ್ಡಿ ಟೂರ್ನಿಯನ್ನು ಮಡಿಕೇರಿ ಕ್ಷೇತ್ರ ಶಾಸಕ ಉದ್ಘಾಟಿಸಿದರು.
ತಾಂತ್ರಿಕ ಕೋರ್ಸ್‌ನ ವಿದ್ಯಾರ್ಥಿಗಳು ಕಲಿಕೆಯೊಂದಿಗೆ ಕಬಡ್ಡಿ ಸೇರಿದಂತೆ ಇನ್ನಿತರ ಕ್ರೀಡೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಕ್ರೀಡಾ ಸ್ಫೂರ್ತಿ ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ಸೀನಪ್ಪ ಮಾತನಾಡಿ, ಇಂತಹ ಟೂರ್ನಿಗಳು ವಿದ್ಯಾರ್ಥಿಗಳಲ್ಲಿ ಪರಸ್ಪರ ಪ್ರೀತಿ, ಸ್ನೇಹಪರತೆ ಬೆಳೆಸುವುದರೊಂದಿಗೆ ಕ್ರೀಡಾ ಮನೋಭಾವ ಬೆಳೆಸಲು ಸಹಕಾರಿಯಾಗಿವೆ ಎಂದರು.
ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಪ್ರಸಾದ್ ಸಾಲ್ಯಾನ್, ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಬಿ.ಜಯವರ್ಧನ್, ಡಿವೈಎಸ್ಪಿ ಗಂಗಾಧರಪ್ಪ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿ.ಟಿ.ವಿಸ್ಮಯಿ, ಸರ್ಕಾರಿ ಪಾಲಿಟೆಕ್ನಿಕ್ ನಿವೃತ್ತ ಪ್ರಾಂಶುಪಾಲ ಎಚ್.ವಿ.ಶಿವಪ್ಪ, ಸ್ಥಳೀಯ ಮುಖಂಡ ವಿ.ಎನ್.ವಸಂತಕುಮಾರ್, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು, ಉಪನ್ಯಾಸಕರು ಹಾಜರಿದ್ದರು.