ಬಾಲಕಿಯರ ವಾಲಿಬಾಲ್ ವಿಭಾಗದಲ್ಲಿ ಪ್ರಥಮ

1st in girls volleyball category
ವಿಜಯಪುರ ವಲಯಮಟ್ಟದ ಕ್ರೀಡಾಕೂಟದಲ್ಲಿ ಆದರ್ಶ ನಗರ ಎಕ್ಸಲಂಟ್ ಶಾಲೆ ಬಾಲಕಿಯರ ವಿದ್ಯಾರ್ಥಿಗಳು ವಾಲಿಬಾಲ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಗೌರವ ಸದಸ್ಯ ರಾಜಶೇಖರ ಕೌಲಗಿ, ನಿರ್ದೇಶಕ ಮಂಜುನಾಥ ಕೌಲಗಿ, ಮುಖ್ಯ ಗುರು ಎಂ.ಐ. ಬಿರಾದಾರ, ರೇಖಾ ಮಾಳಿ ಇತರರಿದ್ದಾರೆ.
Published on

ವಿಜಯಪುರ: ನಗರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಮಹಾತ್ಮ ಗಾಂಧಿ ಶಾಲೆ ಸಹಯೋಗದಲ್ಲಿ ಬುಧವಾರ ನಡೆದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಆದರ್ಶನಗರ ಎಕ್ಸಲಂಟ್ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಬಾಲಕಿಯರ ವಾಲಿಬಾಲ್ ವಿಭಾಗದಲ್ಲಿ ಪ್ರಥಮ ಹಾಗೂ ಬಾಲಕರ ವಾಲಿಬಾಲ್ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. 200 ಮೀ. ಓಟದ ಸ್ಪರ್ಧೆಯಲ್ಲಿ ಸೌಜನ್ಯ ಕಲ್ಯಾಣಿ ಪ್ರಥಮ ಸ್ಥಾನಕ್ಕೆ ಭಾಜನರಾಗಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆ ಚೇರ್ಮನ್ ಬಸವರಾಜ ಕೌಲಗಿ, ಗೌರವ ಸದಸ್ಯ ರಾಜಶೇಖರ ಕೌಲಗಿ, ನಿರ್ದೇಶಕ ಮಂಜುನಾಥ ಕೌಲಗಿ, ಮುಖ್ಯ ಗುರು ಎಂ.ಐ. ಬಿರಾದಾರ, ದೈಹಿಕ ಶಿಕ್ಷಕ ಆರ್.ಕೆ. ದೇಶಪಾಂಡೆ ಇತರರು ಅಭಿನಂದನೆ ಸಲ್ಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net